
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಜಯಪುರ, ಬಾಳೆಹೊನ್ನೂರು, ಮೂಡಿಗೆರೆ ಸೇರಿದಂತೆ ಹಲವು ಠಾಣೆಗಳ PSI ಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಜಯಪುರ ಠಾಣೆಯ ಪಿಎಸ್ಐ ಅಂಬರೀಷ ಅವರನ್ನು ಬಾಳೆಹೊನ್ನೂರು ಠಾಣೆಗೆ ಹಾಗೂ ಬಾಳೆಹೊನ್ನೂರು ಠಾಣೆಯ ಪಿಎಸ್ಐ ರವೀಶ ಅವರನ್ನು ಜಯಪುರ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಮೂಡಿಗೆರೆ ಠಾಣೆಯ ಪಿಎಸ್ಐ ಶ್ರೀನಾಥ್ ರೆಡ್ಡಿ ಅವರನ್ನು ಗೋಣಿಬೀಡು ಠಾಣೆಗೆ ಮತ್ತು ಗೋಣಿಬೀಡು ಠಾಣೆಯ ಪಿಎಸ್ಐ ಹರ್ಷವರ್ಧನ ಹೆಚ್.ಕೆ ಅವರನ್ನು ಮೂಡಿಗೆರೆ ಠಾಣೆಗೆ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.













