ಕೊಪ್ಪ/ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಗೂರು ಬಳಿ ಬೃಹತ್ ಮರವೊಂದು ಬುಡ ಸಮೇತವಾಗಿ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ಮೇಗೂರಿನಿಂದ ಕೊಗ್ರೆ ಗ್ರಾಮಕ್ಕೆ ಹೋಗುವ ಮಾರ್ಗದಲ್ಲಿ ಬೃಹತ್ ಮರ ಬಿದ್ದಿದ್ದು, ಸ್ಥಳಕ್ಕೆ ಜಯಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳೀಯರು, ಪೊಲೀಸರಿಂದ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ
ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ತೆರಳುವ ರಸ್ತೆ ಬಂದ್:
ಕಳೆದ ಕೆಲ ದಿನಗಳಿಂದ ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಗಾಳಿ-ಮಳೆ ಹೊಡೆತಕ್ಕೆ ಬೃಹತ್ ಮರವೊಂದು ರಸ್ತೆಗೆ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ.
ಚಿಕ್ಕಮಗಳೂರು ತಾಲ್ಲೂಕಿನ ಕೈಮರ ಚೆಕ್ ಪೋಸ್ಟ್ ಸಮೀಪ ಬೃಹತ್ ಗಾತ್ರದ ಮರವೊಂದು ರಸ್ತೆಗುರುಳಿದ ಪರಿಣಾಮ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ತೆರಳುವ ರಸ್ತೆ ಬಂದ್ ಆಗಿದೆ.
ಸ್ಥಳಕ್ಕೆ ಗ್ರಾಮಾಂತರ ಪೊಲೀಸರ ಭೇಟಿ, ಪರಿಶೀಲನೆ ನಡೆಸುತ್ತಿದ್ದು, ತೆರವುಗೊಳಿಸಲು ಪೊಲೀಸರು ಮರ ಹಾಗೂ ಸ್ಥಳೀಯರ ಹರಸಾಹಸ ಪಡುತ್ತಿದ್ದಾರೆ.
ಇದನ್ನೂ ಓದಿ: ಫೋನ್ ಪೇನಲ್ಲಿ ಹಣ ಕಳುಹಿಸುವಾಗ ಅರ್ಧಕ್ಕೆ ನಿಂತರೆ ಏನು ಮಾಡಬೇಕು?













