
ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಟ್ರಕ್ವೊಂದು ರಸ್ತೆ ಬದಿಯ ಮನೆಗೆ ನೇರವಾಗಿ ನುಗ್ಗಿದ ಪರಿಣಾಮ ಮನೆಯ ಗೋಡೆ ಸಂಪೂರ್ಣವಾಗಿ ಧ್ವಂಸಗೊಂಡ ಘಟನೆ ತಾಲೂಕಿನ ಕುಡುಮಲ್ಲಿಗೆ ಸಮೀಪದ ಕುಂಬಾರಕೊಪ್ಪ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಏಕಾಏಕಿ ಮನೆಯೊಳಗೆ ನುಗ್ಗಿದ್ದು, ಡಿಕ್ಕಿಯ ರಭಸಕ್ಕೆ ಮನೆಯ ಗೋಡೆ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆ ಸಂಭವಿಸಿದ ಸಂದರ್ಭದಲ್ಲಿ ಮನೆಯೊಳಗೆ ಜನರಿದ್ದರೂ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇನ್ನು ಅಪಘಾತದ ತೀವ್ರತೆಗೆ ಟ್ರಕ್ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.














