ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾರ್ಮಾಡಿ ಘಾಟ್ನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಭದ್ರಾವತಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿಟಿ ವಾಹನ ಹತ್ತನೇ ತಿರುವು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಇದನ್ನೂ ಓದಿ: ಈ ಕುಟುಂಬಗಳಿಗೆ ಎಲ್ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ

ಅಪಘಾತದ ಪರಿಣಾಮವಾಗಿ ವಾಹನದಲ್ಲಿದ್ದ ಒಂಬತ್ತು ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಘಾಟ್ ರಸ್ತೆಯ ಅಪಾಯಕಾರಿ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: LPG ಗ್ರಾಹಕರಿಗೆ ಮಹತ್ವದ ಸೂಚನೆ; ಆಧಾರ್ ಇ ಕೆವೈಸಿ ಮಾಡದಿದ್ರೆ ಸಿಗಲ್ಲ ಸಿಲಿಂಡರ್ !












