ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಬ್ರೇಕ್ ಫೇಲ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೆಡ್ ಗೆ ಡಿಕ್ಕಿ ಹೊಡೆದು ಪಕ್ಕದಲ್ಲಿ ನಿಲ್ಲಿಸಿದ್ದ 2 ಬೈಕ್ ಗಳು ಜಖಂಗೊಂಡ ಘಟನೆ ನಿನ್ನೆ (ಮಂಗಳವಾರ) ನಡೆದಿದೆ.
ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡದಲ್ಲಿ ಜಾಬ್ ಆಫರ್; ಆಕರ್ಷಕ ಸಂಬಳ

ತೀರ್ಥಹಳ್ಳಿಯ ಕೊಪ್ಪ ಸರ್ಕಲ್ ಸಮೀಪ ಬರುತ್ತಿದ್ದಂತೆ ಬ್ರೇಕ್ ಫೇಲ್ ಆಗಿರುವುದು ಚಾಲಕನ ಗಮನಕ್ಕೆ ಬಂದಿದ್ದು, ಬಸ್ ನಲ್ಲಿದ್ದವರನ್ನು ಇಳಿಸಲಾಗಿದೆ. ನಂತರ ಟ್ರಾಫಿಕ್ ಜಾಮ್ ಆದ ಕಾರಣ ಕಲ್ಲನ್ನಿಟ್ಟು ಗಾಡಿ ಮುಂದೆ ಬಿಡಲು ಹೋಗಿ ಈ ಅವಘಡ ಸಂಭವಿಸಿದೆ. ಒಂದು ವೇಳೆ ಗಾಡಿ ವೇಗದಲ್ಲಿದ್ದಾಗ ಏನಾದರೂ ಬ್ರೇಕ್ ಫೇಲ್ ಆಗಿದ್ದರೆ ದೊಡ್ಡ ಅನಾಹುತ ಸಂಭವಿಸುತ್ತಿತ್ತು.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡವರ ಖಾತೆಗೆ ಹಣ ವರ್ಗಾವಣೆ












