ತೀರ್ಥಹಳ್ಳಿಯ ತಹಶೀಲ್ದಾರ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವು

ಬೆಂಗಳೂರು/ತೀರ್ಥಹಳ್ಳಿ: ತೀರ್ಥಹಳ್ಳಿ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಜಕ್ಕಣ್ಣಗೌಡ ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.


ಇದನ್ನೂ ಓದಿ; ಪವರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 2975 ಹುದ್ದೆ, 10th ವಿದ್ಯಾರ್ಹತೆ; ಈಗಲೇ ಅರ್ಜಿ ಸಲ್ಲಿಸಿ


ಮೂಲತಃ ಗದಗ ನಗರದವರಾದ ಜಕ್ಕಣಗೌಡರ್‌ ಮಂಗಳವಾರ ಇಲಾಖೆ ಕಾರ್ಯದ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು. ಕರೆ ಮಾಡಿದಾಗ ಸಂಪರ್ಕಕ್ಕೆ ಸಿಗದಿದ್ದಾಗ ಅನುಮಾನದಿಂದ ಅವರು ವಾಸ್ತವ್ಯ ಮಾಡಿದ್ದ ವಸತಿ ಗೃಹದ ಕೊಠಡಿಯನ್ನು ಪರಿಶೀಲಿಸಿದಾಗ ಮೃತಪಟ್ಟಿರುವುದು ತಿಳಿದಿದೆ.


ಇದನ್ನೂ ಓದಿ; ಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 1170 ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


ಹೃದಯಾಘಾತದಿಂದ ಸಾವು ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಪ್ರಕರಣ ಕುರಿತು ಬೆಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗುರುವಾರ (ಇಂದು) ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಶವವನ್ನು ಕುಟುಂಬಸ್ಥರಿಗೆ ನೀಡಲಿದ್ದಾರೆ. ಆ ಬಳಿಕ ಗದಗದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಶಿವಮೊಗ್ಗ ಡಿಸಿ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.