ಆಗುಂಬೆ ಘಾಟಿಯಲ್ಲಿ ಸುರಂಗ ನಿರ್ಮಾಣಕ್ಕೆ ಪರೀಕ್ಷೆ:ನಿತಿನ್ ಗಡ್ಕರಿ

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ ಸಂಬಂಧ ಪರಿಶೀಲನೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.

 

ಇದನ್ನೂ ಓದಿ; ನರೇಗಾ ಕಾರ್ಮಿಕರಿಗೆ ಕೇಂದ್ರದಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್

ರಾಷ್ಟ್ರೀಯ ಹೆದ್ದಾರಿ ಪ್ರಕಾರ ಮತ್ತು ಲೋಕೋಪಯೋಗಿ ಇಲಾಖೆಗಳ ಸಹಯೋಗದಲ್ಲಿ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಅವರು ಆಗುಂಬೆ ಘಾಟಿಯಲ್ಲಿ ಆಗುತ್ತಿರುವ ಸಮಸ್ಯೆ ಹಾಗೂ ಅಲ್ಲಿ ಸುರಂಗ ಮಾರ್ಗ ನಿರ್ಮಾಣ ಮಾಡಲು ಅವಕಾಶಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತೇನೆ. ನಂತರ ಸುರಂಗ ನಿರ್ಮಾಣದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ; ಗ್ಯಾರಂಟಿ ಯೋಜನೆಯ ಹಣ ಬಂದಿಲ್ವಾ..?; ಹಾಗಾದ್ರೆ ಇಲ್ಲಿದೆ ಗುಡ್ ನ್ಯೂಸ್

200 ಕೋಟಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ:
ಏಳು ಜಿಲ್ಲೆಗಳಿಗೆ ಸಂಬಂಧಿಸಿದ 6,200 ರೂ ಕೋಟಿ ಮೊತ್ತದ ಒಟ್ಟು 300 ಕಿ.ಮೀ ಉದ್ದದ ಒಟ್ಟು 18 ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳ ಉದ್ಘಾಟನೆ ಹಾಗೂ 2,138.30 ರೂ. ಕೋಟಿ ಮೊತ್ತದ ಕಾಮಗಾರಿಗಳಿಗೆ ಶಿವಮೊಗ್ಗದಲ್ಲಿ ಚಾಲನೆ ನೀಡಿದರು.

 

ಕೊಡಚಾದ್ರಿ-ಕೊಲ್ಲೂರು ನಡುವೆ ಕೇಬಲ್ ಕಾರ್ ಯೋಜನೆಯನ್ನು ಸಂಸದ ರಾಘವೇಂದ್ರ ಗಮನಕ್ಕೆ ತಂದಿದ್ದಾರೆ. ಇದೇ ಸೇರಿದಂತೆ ಈ ಭಾಗದ ಹಲವು ಯೋಜನೆಗಳನ್ನು 2028 ರೊಳಗೆ ಪೂರ್ಣ ಗೊಳಿಸಲಾಗುವುದು. ಜೊತೆಗೆ ತುಮಕೂರು- ಶಿವಮೊಗ್ಗದ ನಡುವೆ ನಡೆಯುತ್ತಿರುವ ಹೆದ್ದಾರಿ ನಿರ್ಮಾಣ ಕಾಮಗಾರಿ ಚುರುಕಿನಿಂದ ಸಾಗುತ್ತಿದೆ. 2024 ರ ಕೊನೆಯಲ್ಲಿ ಇದು ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದರು.

ಜಯಪುರ: ಕಾಡು ಪ್ರಾಣಿಯ ಮಾಂಸ ಶೇಖರಣೆ : ಆರೋಪಿಗಳ ಬಂಧನ

 

ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಕಾಡು ಪ್ರಾಣಿಯ ಮಾಂಸ ಶೇಖರಣೆ ಮಾಡಿಟ್ಟಿದ್ದ ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದ ಎಲೆಮಡಲು ಗ್ರಾಮದಲ್ಲಿ ನಡೆದಿದೆ. ವಿಜೇಂದ್ರ ನಾಯ್ಕ(44), ವಿಶ್ವನಾಥ(37) ಬಂಧಿತ ಆರೋಪಿಗಳು.

ಇದನ್ನೂ ಓದಿ;  ರೈತರೇ ಗಮನಿಸಿ; ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ; ಯಾವುದೆಲ್ಲಾ ಸೌಲಭ್ಯ, ಎಲ್ಲಿ ಅರ್ಜಿ ಸಲ್ಲಿಕೆ?

ಎಲೆಮಡಲು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದ ಕಾಡುಕುರಿಯ ಮಾಂಸವನ್ನು ತಯಾರಿಸಿ, ಮನೆಯಲ್ಲಿ ಶೇಖರಣೆ ಮಾಡಿರುವುದರ ಹಿನ್ನೆಲೆ ಆರೋಪಿಗಳಿಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗಳಿಂದ 1.055 ಕೆ.ಜಿ ಕಾಡುಕುರಿಯ ಮಾಂಸವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.