ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಗರದ ಐ.ಜಿ. ರಸ್ತೆಯಲ್ಲಿ ನಡೆದ ಎ.ಆರ್. ಫರ್ನಿಚರ್ ಅಂಗಡಿ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ವ್ಯವಸ್ಥಿತ ಕೃತ್ಯ ಬಯಲಾಗಿದೆ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಕಳೆದ ಭಾನುವಾರ ನಡೆದ ಈ ದುರ್ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿಯಾಗಿದ್ದವು. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಎ.ಆರ್. ಫರ್ನಿಚರ್ ಪಕ್ಕದಲ್ಲೇ ಇರುವ ಮತ್ತೊಂದು ಫರ್ನಿಚರ್ ಅಂಗಡಿ ಮಾಲೀಕ ಸಂಚು ರೂಪಿಸಿರುವುದು ಕಂಡುಬಂದಿದೆ.
ತನ್ನ ಅಂಗಡಿಗಿಂತ ಪಕ್ಕದ ಅಂಗಡಿಯಲ್ಲಿ ವ್ಯಾಪಾರ ಚೆನ್ನಾಗಿ ನಡೆಯುತ್ತಿದೆ ಎಂದು ಈ ಕೃತ್ಯ ಎಸಗಿದ್ದಾನೆ. ಇದಕ್ಕಾಗಿ ಇಬ್ಬರಿಗೆ 20 ಸಾವಿರ ರೂಪಾಯಿ ಸುಪಾರಿ ನೀಡಿದ್ದಾನೆ. ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಕೃತ್ಯದಲ್ಲಿ ಭಾಗಿಯಾದ ಮೂವರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!












