ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಯರೇಹಳ್ಳಿ ತಾಂಡದ ಮನೆಯಲ್ಲಿ ಹಣ, ಚಿನ್ನಾಭರಣ ದೋಚಿದ್ದ ಆರೋಪಿಗಳನ್ನು ಪಟ್ಟಣದ ಪೊಲೀಸರು ಬಂಧಿಸಿದ್ದಾರೆ. ಯರೇಹಳ್ಳಿ ರಾಮಕೃಷ್ಣ (32), ಮೇಘರಾಜ್ (25) ಬಂಧಿತ ಆರೋಪಿಗಳು.
ಇದನ್ನೂ ಓದಿ: ಪಿಎಂ-ಕಿಸಾನ್ 21ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ: 9 ಕೋಟಿ ರೈತರಿಗೆ ಒಟ್ಟು 18,000 ಕೋಟಿ ರೂ. ಹಣ ಸಂದಾಯ

ಬಂಧಿತರಿಂದ 9.63 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು 4,400 ರೂ. ವಶಕ್ಕೆ ಪಡೆದಿದ್ದಾರೆ. ಯರೇಹಳ್ಳಿ ತಾಂಡದ ಆಶಾ ಎಂಬುವವರ ಮನೆಯಲ್ಲಿ ಬುಧವಾರ ಮೇಲ್ಪಾವಣಿಯ ಶೀಟ್ ತೆಗೆದು ನುಗ್ಗಿ ಚಿನ್ನಾಭರಣ, ಹಣ ದೋಚಿದ್ದರು. ಕಳವು ನಡೆದ 48 ಗಂಟೆಯೊಳಗೆ ಪಟ್ಟಣದ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ರಾಮಚಂದ್ರನಾಯಕ, ಪಿಎಸ್ಐಗಳಾದ ಮಂಜುನಾಥ್ ಮನ್ನಂಗಿ, ದೇವೇಂದ್ರ ರಾಥೋಡ್, ಸಿಬ್ಬಂದಿ ರಾಮಪ್ಪ, ರುದ್ರೇಶ್, ರಿಯಾಜ್, ಧನಂಜಯ ಸ್ವಾಮಿ, ಶ್ರೀನಿವಾಸ ಮತ್ತಿತರರಿದ್ದರು.
ಇದನ್ನೂ ಓದಿ: ಆಲದ ಮರದ ನೆರಳಿನಲ್ಲಿ ಶುರುವಾದ ಭಾರತೀಯ ಸ್ಟಾಕ್ ಮಾರ್ಕೆಟ್ – ಇಂದು 400 ಲಕ್ಷ ಕೋಟಿಯ ಮೌಲ್ಯ!












