ಕೊಪ್ಪ ಪೊಲೀಸರ ಕಾರ್ಯಾಚರಣೆ: ದನ ಕಳ್ಳತನ ಪ್ರಕರಣದ ಇಬ್ಬರು ಆರೋಪಿಗಳ ಬಂಧನ

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಸುಮಾರು ಎರಡು ತಿಂಗಳ ಹಿಂದೆ ನಡೆದ ದನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಂದಿನಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಕೊಪ್ಪ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮುಬಾರಕ್ @ ಮುಬೀನಾ ಹಾಗೂ ಅಹ್ಮದ್ ಬೇಗ್ @ ಸುಹೀಲ್ @ ಚಾಂದ್ ಪಾಷಾ ಎಂದು ಗುರುತಿಸಲಾಗಿದೆ.

ಗಡಿಕಲ್ ಚೆಕ್‌ಪೋಸ್ಟ್‌ನಲ್ಲಿ ನಡೆದಿದ್ದ ಘಟನೆ

ದಿನಾಂಕ 07-07-2026ರಂದು ಬೆಳಗಿನ ಜಾವ ಸುಮಾರು 3.30ರ ವೇಳೆಗೆ, ಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ಮಧು ಅವರು ರೌಂಡ್ಸ್‌ನಲ್ಲಿ ಇದ್ದ ಸಂದರ್ಭದಲ್ಲಿ, ಪೊಲೀಸ್ ಸಿಬ್ಬಂದಿಗಳು ಗಡಿಕಲ್ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಈ ವೇಳೆ ಚೆಕ್‌ಪೋಸ್ಟ್ ಮೂಲಕ ಬಂದ ಇನ್ನೋವಾ ಕಾರನ್ನು ತಪಾಸಣೆಗಾಗಿ ನಿಲ್ಲಿಸಲು ಸೂಚಿಸಲಾಗಿತ್ತು. ಆದರೆ ಕಾರು ನಿಲ್ಲಿಸದೆ ಮುಂದೆ ತೆರಳಿತ್ತು.

ಹಿಂಬಾಲಿಸಿ ವಾಹನ ತಡೆದು ತಪಾಸಣೆ

ಚೆಕ್‌ಪೋಸ್ಟ್‌ನಲ್ಲಿ ನಿಲ್ಲಿಸದೆ ತೆರಳಿದ ಕಾರನ್ನು ಪೊಲೀಸರು ಹಿಂಬಾಲಿಸಿ ತಡೆದು ತಪಾಸಣೆ ನಡೆಸಿದ್ದರು. ಈ ವೇಳೆ ಕಾರಿನಲ್ಲಿ ಎರಡು ದನಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿತ್ತು.

ಎರಡು ತಿಂಗಳ ಬಳಿಕ ಆರೋಪಿಗಳ ಬಂಧನ

ಪ್ರಕರಣ ದಾಖಲಾದ ಬಳಿಕ ಸುಮಾರು ಎರಡು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಆರೋಪಿಗಳಾದ ಮುಬಾರಕ್ @ ಮುಬೀನಾ ಹಾಗೂ ಅಹ್ಮದ್ ಬೇಗ್ @ ಸುಹೀಲ್ @ ಚಾಂದ್ ಪಾಷಾ ಅವರನ್ನು ಕೊಪ್ಪ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಇಬ್ಬರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದ ತನಿಖೆಯನ್ನು ಕೊಪ್ಪ ಪೊಲೀಸರು ಮುಂದುವರಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.