ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ಸೃಷ್ಟಿಸಿ ವ್ಯಕ್ತಿಯೊಬ್ಬರ ಖಾಸಗಿ ವಿಡಿಯೋವನ್ನು ಹರಿಬಿಟ್ಟಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಶಿವಮೊಗ್ಗ ಕ್ರೈಂ ಪೊಲೀಸರು ಬಂದಿಸಿದ್ದಾರೆ.
ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ರಿಲೀಫ್; ಏನದು, ಮಿಸ್ ಮಾಡ್ದೆ ಈ ಸುದ್ದಿ ಓದಿ

ಕಳೆದ ಫೆ.6ರಂದು ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊಬ್ಬರು ತನ್ನ ಖಾಸಗಿ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಅಪಲೋಡ್ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗಾಗಿ ತಂಡ ರಚಿಸಿ ಕಾರ್ಯಾಚರಣೆ ಕೈಗೊಂಡಿದ್ದರು.

ತಾಂತ್ರಿಕ ದಾಖಲೆಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ ಹೊಸನಗರ ನಿವಾಸಿ ಸೀಮಾ ಜೂಲಿಯನ್ ಸೆರಾವೂ ಹಾಗೂ ಬೆಂಗಳೂರಿನ ನಿವಾಸಿ ನಿಶಾಂತ್ ಎಂಬುವವರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮೊಬೈಲ್ ನಲ್ಲೇ ಸಿಗಲಿದೆ ಹಳೆಯ ಪಹಣಿ
















