ಸಕಲೇಶಪುರ ವಲಯದ ಮಾರನಹಳ್ಳಿ ವ್ಯಾಪ್ತಿಯ ಕಾಡುಮನೆ ಎಸ್ಟೇಟ್ನ ಮೀಸಲು ಅರಣ್ಯದಲ್ಲಿ ಅಕ್ರಮವಾಗಿ ಉಡವನ್ನು ಬೇಟೆಯಾಡಿ ಮಾಂಸವನ್ನಾಗಿ ಪರಿವರ್ತಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೋಮವಾರ ಬಂಧಿಸಿದ್ದಾರೆ.
ಇದನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!

ಬಂಧಿತರನ್ನು ದಕ್ಷಿಣ ಕನ್ನಡದ ಶಿರಾಡಿಯ ಬಾಬು ಪಿ ಎ ಮತ್ತು ಕೇರಳದ ಇಡುಕ್ಕಿಯ ಬಿನೋಯಿ ಎಂದು ಗುರುತಿಸಲಾಗಿದೆ.
ಬಂಧಿತರಿಂದ ಸಿಂಗಲ್ ಬ್ಯಾರೆಲ್ ಗನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಉಳಿದ ಆರೋಪಿಗಳಾದ ಜೋಶ್, ಜೇಮ್ಸ್, ಅಭಿಲಾಷ್, ಪ್ರದೀಪ್ ಹಾಗೂ ಬಾಬುಟ, ಬಾಬು ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಇದನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ












