
ಆಲ್ದೂರು: (ನ್ಯೂಸ್ ಮಲ್ನಾಡ್ ವರದಿ) ಗಾಂಜಾ ಮಾರಾಟ ಮಾಡಲು ಯತ್ನಿಸಿದ ಅಸ್ಸಾಂ ಮೂಲದ ಇಬ್ಬರನ್ನು ಬಂಧಿಸಿರುವ ಘಟನೆ ಆಲ್ದೂರು ಪಟ್ಟಣದ ಸಂತೆ ಮೈದಾನದಲ್ಲಿ ನಡೆದಿದೆ.
ಇದನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!

ಅಸ್ಸಾಂ ಮೂಲದ ಇಬ್ಬರನ್ನು ಆಲ್ದೂರು ಪೊಲೀಸರು ಬಂಧಿಸಿ 2 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಗುರುವಾರ ರಾತ್ರಿ 9 ಗಂಟೆ ಸಮಯದಲ್ಲಿ ಗಾಂಜಾ ಮಾರಾಟ ಮಾಡುವ ಸಂದರ್ಭದಲ್ಲಿ ಅಸ್ಸಾಂ ಮೂಲದ ಶಾಹಿದ್ ಅಲಿ, ಮಹರ್ ಅಲಿ ಎಂಬುವರನ್ನು ಮಾಲುಸಮೇತ ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಶಾಹಿದ್ ಅಲಿ ಸಂತೆಮೈದಾನದಲ್ಲಿ ವಾಸವಾಗಿದ್ದರೆ, ಮಹರ್ ಅಲಿ ಹಳಿಯೂರು ಗ್ರಾಮದ ಕಾಫಿ ಎಸ್ಟೇಟ್‌ನ ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ. ಕಾರ್ಯಾಚರಣೆಯಲ್ಲಿ ಪಿಎಸ್‌ಐ ರವಿ, ಸಿಬ್ಬಂದಿ ಇದ್ದರು.
ಇದನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ
















