ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಹುಲಿ ಅಂಗಾಂಗ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಕುಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಡ್ರ ಗ್ರಾಮದ ಸತೀಶ್ ಹಾಗೂ ಸುಧೀರ್ ಬಂಧಿತ ಆರೋಪಿಗಳು.
ಇದನ್ನೂ ಓದಿ; ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್

ಪ್ರಕರಣವೊಂದರಲ್ಲಿ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದ ಸತೀಶ್ ನನ್ನು ಖಚಿತ ಮಾಹಿತಿ ಮೇರೆಗೆ ಮೂಡಿಗೆರೆ ಅರಣ್ಯ ಸಿಬ್ಬಂದಿ ತಡೆದು ಬೈಕ್ ಗೆ ನೇತುಹಾಕಿದ್ದ ಬ್ಯಾಗ್ ಪರೀಶೀಲನೆ ನಡೆಸಿದಾಗ ಅದರಲ್ಲಿ ಹುಲಿ ತಲೆಬುರುಡೆ, ಮೂರು ಹುಲಿ ಹಲ್ಲು, ಮೂರು ಹುಲಿ ಉಗುರು, ಒಂದು ಮೂಳೆ ಇರುವುದು ಪತ್ತೆಯಾಗಿದೆ.

ಇದನ್ನೂ ಓದಿ; ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
ತಕ್ಷಣ ಸತೀಶ್ ಮತ್ತು ಆತನ ಜೊತೆಗಿದ್ದ ಸುಧೀರ್ ಇವರುಗಳನ್ನು ಅರಣ್ಯ ಸಿಬ್ಬಂದಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಚಿಕ್ಕಮಗಳೂರು ಡಿ.ಎಫ್.ಓ. ರಮೇಶ್ ಬಾಬು ಅವರು, ಬಂಧಿತರ ವಿರುದ್ಧ ವನ್ಯಜೀವಿ ಕಾಯ್ದೆ 1972ರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ. ಬಂಧಿತರಿಂದ ಒಂದು ಹುಲಿ ತಲೆಬುರುಡೆ, ಮೂರು ಹಲ್ಲು, ಮೂರು ಉಗುರು, ಒಂದು ಮೂಳೆ, ನಾಲ್ಕು ಮೊಬೈಲ್, ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರವಾಗಿ ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ಹಿಂದೆ ಯಾರೇ ಇದ್ದರು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಇನ್ನು ಬಂಧಿತ ಸತೀಶ್ ಕೆಲ ದಿನಗಳ ಹಿಂದೆ ಹುಲಿ ಉಗುರು ಧರಿಸಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ. ಇದೀಗ ಹುಲಿ ತಲೆಬುರುಡೆಯನ್ನೇ ಇಟ್ಟುಕೊಂಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ.
ಪಾರದರ್ಶಕ ತನಿಖೆಗೆ ಆಗ್ರಹ:
ಈ ಪ್ರಕರಣದಲ್ಲಿ ಸ್ಥಳೀಯರು ಹಲವಾರು ಅನುಮಾನಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಭಾಗದಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಇರುವ ಬಗ್ಗೆಯೂ ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಾರೆಯಾಗಿ ಹುಲಿಯ ಅಂಗಾಂಗಗಳು ಪತ್ತೆಯಾಗಿರುವ ಪ್ರಕರಣದ ಬಗ್ಗೆ ಅಧಿಕಾರಿಗಳು ಸಮಗ್ರ ತನಿಖೆ ನಡೆಸಬೇಕು, ಈ ಜಾಲದ ಮೂಲವನ್ನು ಭೇದಿಸಿ ನಿಜವಾದ ತಪ್ಪಿತಸ್ತರಿಗೆ ಶಿಕ್ಷೆಯಾಗುವಂತೆ ಕ್ರಮ ಜರುಗಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ. (ವರದಿ- ತನು ಕೊಟ್ಟಿಗೆಹಾರ)
ಚಿಕ್ಕಮಗಳೂರು: ದತ್ತಪೀಠದಲ್ಲಿ ಹೋಮಕ್ಕೆ ಅವಕಾಶ ನೀಡದ್ದಕ್ಕೆ ಡಿ.ಸಿ ಕಛೇರಿಯಲ್ಲಿ ಪ್ರತಿಭಟನೆ | ಐವರು ಹಿಂದೂ ಕಾರ್ಯಕರ್ತರ ಬಂಧನ, ಬಿಡುಗಡೆ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲಾಧಿಕಾರಿ ಕಚೇರಿ ಬಾಗಿಲಲ್ಲೇ ಹೋಮ ನಡೆಸಿ ಕಚೇರಿಗೆ ನುಗ್ಗಲು ಯತ್ನಿಸಿದ ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಸೇರಿದಂತೆ ದೀಕ್ಷಿತ್, ಕಿರಣ್, ಕಿಶೋರ್, ಅಮಿತ್ ಗೌಡನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಇದನ್ನೂ ಓದಿ; ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
ಏನಿದು ಪ್ರಕರಣ:
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ದತ್ತಪೀಠದ ಹೋಮ ಮಂಟಪದಲ್ಲಿ ರಾಮ ತಾರಕ ಹೋಮ ಹವನ ಮಾಡಲು ಹಿಂದೂ ಸಂಘಟನೆಗಳು ಮುಂದಾಗಿದ್ದವು. ಆದರೆ, ಜಿಲ್ಲಾಡಳಿತ ಇದಕ್ಕೆ ನಿರ್ಬಂಧ ಹೇರಲಾಗಿತ್ತು. ಇದರಿಂದ ಕೆರೆಳಿದ ಹಿಂದೂ ಕಾರ್ಯಕರ್ತರು ಡಿಸಿ ಕಚೇರಿ ಮುಂದೆಯೇ ಕರ್ಪೂರ ಹಚ್ಚಿ, ಶ್ರೀರಾಮನಿಗೆ ಹೋಮ ಹವನ ಮಾಡಿ, ರಾಮ ನಾಮ ಜಪ ಮಾಡಿದ್ದರು. ಅಷ್ಟೇ ಅಲ್ಲದೆ ಹೋಮಕುಂಡವನ್ನು ತಂದು ಹೋಮ ಮಾಡಲು ಮುಂದಾದಾಗ ಪೊಲೀಸರು ಹೋಮಕುಂಡವನ್ನು ವಶಕ್ಕೆ ಪಡೆದುಕೊಂಡರು. ಇದಾದ ಬಳಿಕ ಡಿಸಿ ಕಚೇರಿಗೆ ನುಗ್ಗಲು ಯತ್ನ ನಡೆದವು. ಈ ವೇಳೆ ಓರ್ವ ಕಾರ್ಯಕರ್ತ ಪೊಲೀಸ್ ವಾಹನಕ್ಕೆ ಅಡ್ಡಲಾಗಿ ಮಲಗಿದ್ದರು. ಈ ಘಟನೆ ಸಂಬಂಧ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಕಲಂ 353 ಹಾಗೂ 341 ಪ್ರಕಾರ ಈ ಐವರ ವಿರುದ್ಧ ಅತಿಕ್ರಮ ಪ್ರವೇಶ ಕೇಸ್ ದಾಖಲಾಗಿತ್ತು. ಉಪವಿಭಾಗಾಧಿಕಾರಿ ದಲ್ಮೀತ್ ಕುಮಾರ್ ನಗರ ಠಾಣೆಗೆ ದೂರು ನೀಡಿದ್ದರು. ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಐವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಐವರಿಗೂ ಜಾಮೀನು ದೊರಕಿದೆ.












