ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಒಂದು ಗಂಟೆಗೆ ಅಂತರದಲ್ಲಿ ಎರಡು ಕಾರುಗಳು ನದಿಗೆ ಬಿದ್ದಿರುವ ಘಟನೆ ನಡೆದಿದೆ.
ಇದನ್ನೂ ಓದಿ: 60 ಪರ್ಸೆಂಟೇಜ್ ತೆಗೆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಮೂಡಿಗೆರೆ ತಾಲೂಕಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಗೆ ಒಂದರ ಹಿಂದೆ ಒಂದು ಅವಾಂತರ ಸೃಷ್ಟಿಯಾಗುತ್ತಿದೆ. ಮೂಡಿಗೆರೆಯಿಂದ ಕೊಟ್ಟಿಗೆಹಾರ ಸಂಪರ್ಕಿಸುವ ಬಣಕಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೇಮಾವತಿ ಬಿದ್ದಿದ್ದು, ಮತ್ತೊಂದು ಕಾರು ರಾಮಣ್ಣನ ಗಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದೆ.
ಇದನ್ನೂ ಓದಿ: ಆಸ್ತಿ ಖರೀದಿ, ಮಾರಾಟಗಾರರಿಗೆ ಭರ್ಜರಿ ಸುದ್ದಿ; ಏನದು? ಇಲ್ಲಿದೆ ನೋಡಿ
ಸದ್ಯ ಹಗ್ಗ ಕಟ್ಟಿ ಹಳ್ಳಕ್ಕೆ ಇಳಿದು ಕಾರಿನಲ್ಲಿದ್ದವರ ರಕ್ಷಣೆ ಮಾಡಿದ್ದು, ಬಣಕಲ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ವಿವಿಧ ಯೋಜನೆಯಲ್ಲಿ ಶೇ.90ರಷ್ಟು ಸಹಾಯಧನ












