ಕಡೂರು: (ನ್ಯೂಸ್ ಮಲ್ನಾಡ್ ವರದಿ) ಸಮಾಜದಲ್ಲಿ ಹೆಣ್ಣುಮಕ್ಕಳು ಕೂಡ ಎಲ್ಲ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಬಹುದು ಎಂಬುದಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ನಡೆದ ಘಟನೆ ಒಂದು ಉದಾಹರಣೆಯಾಗಿದೆ.
ಇದನ್ನೂ ಓದಿ: ವಾಹನ ಮಾಲೀಕರ ಗಮನಕ್ಕೆ; ಇನ್ಮುಂದೆ ಗಾಡಿ FC ಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್

ಬೀರೂರು ಪಟ್ಟಣದ ನಿವಾಸಿ ವಿಶ್ವನಾಥ್ ಅವರು ನಿನ್ನೆ ನಿಧನರಾದರು. ಅವರಿಗೆ ಗಂಡು ಮಕ್ಕಳು ಇರಲಿಲ್ಲ, ಕೇವಲ ಇಬ್ಬರು ಹೆಣ್ಣು ಮಕ್ಕಳು ಮಾತ್ರ ಇದ್ದರು. ತಂದೆಯ ಸಾವಿನಿಂದ ದುಃಖಿತರಾಗಿದ್ದ ಪುತ್ರಿಯರು, ತಂದೆಯ ಮೇಲಿನ ಅಪಾರ ಪ್ರೀತಿ ಮತ್ತು ಗೌರವದಿಂದ ತಾವೇ ಅಂತ್ಯಸಂಸ್ಕಾರ ನೆರವೇರಿಸಲು ಮುಂದಾದರು.
ಭಾವಸಾರ ಕ್ಷತ್ರಿಯ ಸಮಾಜದ ಸಂಪ್ರದಾಯದಂತೆ ನಡೆಯುವ ಎಲ್ಲಾ ವಿಧಿವಿಧಾನಗಳನ್ನು ಇಬ್ಬರು ಪುತ್ರಿಯರು ಅತ್ಯಂತ ಶ್ರದ್ಧೆಯಿಂದ ನೆರವೇರಿಸಿದರು. ಮೃತ ವಿಶ್ವನಾಥ್ ಅವರ ಪುತ್ರಿ ಐಶ್ವರ್ಯ ಮತ್ತು ಅವರ ಸೋದರಿ ಚಿತೆಗೆ ಅಗ್ನಿಸ್ಪರ್ಶ ಮಾಡುವ ಮೂಲಕ ತಂದೆಗೆ ಅಂತಿಮ ವಿದಾಯ ಸಲ್ಲಿಸಿದರು.
ಇದನ್ನೂ ಓದಿ: ನಿಮ್ಮ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದೀರಾ?; ಅಂತಹವರು ಈ ಸ್ಟೋರಿ ಓದಲೇಬೇಕು?












