ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಾಳೆಯಿಂದ ಎರಡು ದಿನ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ನೀಡಿರುವ ಹಿನ್ನೆಲೆ ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ಪಾನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಇಂತಹವರಿಗೆ 10 ಸಾವಿರ ದಂಡ!

ನಾಳೆಯಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ನದಿತೀರ, ಬೆಟ್ಟಗುಡ್ಡಗಳ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಲ್ಲದೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, NR ಪುರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ರಜೆ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; 15,000 ಸಂಬಳ












