ಹಾಸನ: (ನ್ಯೂಸ್ ಮಲ್ನಾಡ್ ವರದಿ) ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪಾದಾಚಾರಿಗಳ ಮೇಲೆ ಖಾಸಗಿ ಬಸ್ ಹರಿದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ತಾಲ್ಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ.
ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಆನಗೋಳು ಗ್ರಾಮದ ಸುರೇಶ್ (60) ಹಾಗೂ ಕುಮಾರ್ (55) ಮೃತ ದುರ್ದೈವಿಗಳು.

ಇದನ್ನೂ ಓದಿ: ಜಮೀನು ಸರ್ವೆಯಲ್ಲಿ ಬದಲಾವಣೆ;ಇನ್ಮುಂದೆ 10 ನಿಮಿಷದಲ್ಲಿ ಮುಗಿಯಲಿದೆ ಲ್ಯಾಂಡ್ ಸರ್ವೆ; ಈ ಕುರಿತು ಕಂದಾಯ ಸಚಿವ ಹೇಳಿದ್ದೇನು?
ಇಂದು ಮುಂಜಾನೆ ರಸ್ತೆ ಬದಿ ಧರ್ಮಸ್ಥಳಕ್ಕೆ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿಗಳಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊರ್ವ ದಿನೇಶ್ ಎನ್ನುವವರ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಇಂಧನ ಸಚಿವ ಕೊಟ್ರು ಸಿಹಿಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ














