ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಅರಣ್ಯ ಅಧಿಕಾರಿಗಳ ಕೆಲಸಕ್ಕೆ ಅಡ್ಡಬಂದು, ಅವರನ್ನ ತಳ್ಳಾಡಿದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೆ ಮೂರು ವರ್ಷ ಶಿಕ್ಷೆ ವಿಧಿಸಲಾಗಿದೆ.
ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ 10,000 ಸ್ಕಾಲರ್ ಶಿಪ್; ಈ ಅರ್ಹತೆ ಕಡ್ಡಾಯ! ಏನದು ಇಲ್ಲಿದೆ ನೋಡಿ

ಏನಿದು ಪ್ರಕರಣ:
ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಆಲಗೇರಿ ಗ್ರಾಮದಲ್ಲಿ 28/01/2021 ರಂದು ಭದ್ರಪ್ಪ ಮತ್ತು ರಕ್ಷಿತ್ ಅರಣ್ಯ ಜಾಗವನ್ನು ಒತ್ತುವರಿ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಗುಂಬೆ ವಲಯದ ಉಪವಲಯ ಅರಣ್ಯಾಧಿಕಾರಿಯಾದ ಕಿರಣ ಕುಮಾರ್ ಮತ್ತು ಅರಣ್ಯ ರಕ್ಷಕರಾದ ಅಭಿಷೇಕ್ ಕಾವಡಿ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಅವರನ್ನು ಭದ್ರಪ್ಪ ಮತ್ತು ರಕ್ಷಿತ್ ಅವಾಚ್ಯ ಶಬ್ದಗಳಿಂದ ಬೈದು ದೂಡಿ ಬೀಳಿಸಿದ್ದರು ಎಂದು ದೂರಲಾಗಿತ್ತು. ಈ ಸಂಬಂಧ ಐಪಿಸಿ 341, 504, 332, 353 ಸಹಿತ 34 ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣದ ಸಂಬಂಧ ಅಂದಿನ ಆಗುಂಬೆ ಪಿಎಸ್ ಐ ಶಿವಕುಮಾರ್ ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಇದನ್ನೂ ಓದಿ: KSB ಯಿಂದ ಇಂತಹ ವಿದ್ಯಾರ್ಥಿಗಳಿಗೆ 25,000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಇದೀಗ ಹಿರಿಯ ವ್ಯವಹಾರ ಮತ್ತು ಜೆಎಂ ಎಫ್ ಸಿ ನ್ಯಾಯಾಲಯ ತೀರ್ಪು ನೀಡಿದ್ದು, ಭದ್ರಪ್ಪ (57) ಹಾಗೂ ರಕ್ಷಿತ್ (30) ಆರೋಪಿತರಿಗೆ 3 ವರ್ಷ ಕಠಿಣ ಕಾರಾಗೃಹವಾಸ, 19,000/ ದಂಡ, ದಂಡಕಟ್ಟಲು ವಿಫಲರಾದಲ್ಲಿ 01 ವರ್ಷ ಸಾದಾ ಕಾರಾಗೃಹವಾಸ ಶಿಕ್ಷೆ ವಿಧಿಸಿದೆ.
ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಹೊಸ ಆದೇಶ; ಈ ಕೆಲಸ ಮಾಡಲು ಡೆಡ್ ಲೈನ್ ಫಿಕ್ಸ್ ಮಾಡಿದ ಸರ್ಕಾರ; ಏನದು? ಇಲ್ಲಿದೆ ನೋಡಿ












