
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಇತ್ತೀಚಿಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮನೆಗಳ್ಳತನದಲ್ಲಿ ಚಡ್ಡಿ ಗ್ಯಾಂಗ್ ಅಲರ್ಟ್ ಆಗಿತ್ತು. ಇದೀಗ ಮನೆಗಳ್ಳತನ ಮಾಡುತ್ತಿದ್ದ ಚಡ್ಡಿ ಗ್ಯಾಂಗಿನ ಇಬ್ಬರು ಕಳ್ಳರನ್ನು ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ಪಂಚಾಯಿತಿಯಲ್ಲೇ ಸಿಗಲಿವೆ ಜನನ-ಮರಣ ಪ್ರಮಾಣ ಪತ್ರ

ಮಹಾರಾಷ್ಟ್ರ ಮೂಲದ ಪಪ್ಪು ಟಿಪ್ಪು ಪವಾರ್ ಹಾಗೂ ಮಂಗೇಶ್ ಅಂಕುಶ್ ಶಿಂಧೆ ಬಂಧಿತರು. ಕದ್ದಿದ್ದ 32 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಚಿಕ್ಕಮಗಳೂರು ನಗರ ಪೊಲೀಸರು ನಡೆಸಿದ ಕಾರ್ಯಚರಣೆ ಮೂಲಕ ಚಡ್ಡಿ ಗ್ಯಾಂಗಿನ 17 ಪ್ರಕರಣಗಳನ್ನು ಭೇದಿಸಿದ ಪೊಲೀಸರು 495 ಗ್ರಾಂ ಚಿನ್ನ, 1010 ಗ್ರಾಂ ಬೆಳ್ಳಿ, 75 ಸಾವಿರ ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಡ್ಡಿ ಗ್ಯಾಂಗ್ ಕಳ್ಳತನ ಮಾಡುತ್ತಿದ್ದು, ಚಿಕ್ಕಮಗಳೂರು ಸೇರಿ ರಾಜ್ಯದ ವಿವಿಧ ಕಡೆ ಈ ಗ್ಯಾಂಗ್ ಕಳ್ಳತನ ಮಾಡಿದ್ದು, ಪ್ರಕರಣ ದಾಖಲಾಗಿದ್ದವು.
ಇದನ್ನೂ ಓದಿ: ಗೃಹಲಕ್ಷ್ಮಿ ಸಹಕಾರ ಸಂಘ ಸ್ಥಾಪನೆಗೆ ಅನುಮತಿ













