
ಸಕಲೇಶಪುರ: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಉದೇವಾರ ಗ್ರಾಮದ ಹೊರವಲಯದ ಎಬಿಸಿ ಕಾಫಿ ಎಸ್ಟೇಟ್‌ನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಹೆಣ್ಣಾನೆ ಹಾಗೂ ಮರಿಯಾನೆ ಮೃತಪಟ್ಟಿದೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ಶನಿವಾರ ರಾತ್ರಿ ಗಾಳಿಯಿಂದಾಗಿ ಮರದ ರಂಬೆಯೊಂದು ವಿದ್ಯುತ್ ತಂತಿ ಮೇಲೆ ಬಿದ್ದು ತಂತಿ ತುಂಡಾಗಿ ನೆಲಕ್ಕೆಬಿದ್ದಿದೆ. ಭಾನುವಾರ ಮುಂಜಾನೆ ಆಹಾರ ಅರಸಿ ತೋಟದಲ್ಲಿ ಸುತ್ತಾಡುತ್ತಿದ್ದ ಸುಮಾರು 30 ವರ್ಷದ ಹೆಣ್ಣಾನೆ ಹಾಗೂ ಮೂರು ವರ್ಷದ ಮರಿಯಾನೆ ತಂತಿ ತುಳಿ ಸ್ಥಳದಲ್ಲೇ ಮೃತಪಟ್ಟಿವೆ. ಕಾರ್ಮಿಕರು ತೋಟಕ್ಕೆ ತೆರಳಿದ ವೇಳೆ ವಿಚಾರ ಬೆಳಕಿಗೆ ಬಂದಿದೆ.

ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ
ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸ್ಥಳದಲ್ಲಿ ಅಂತ್ಯ ಸಂಸ್ಕಾರ ನಡೆಸಿದ್ದಾರೆ.













