ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನಾಪತ್ತೆ ಪ್ರಕರಣ | ಒಬ್ಬರ ಮೃತ ದೇಹ ಪತ್ತೆ

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಭೀಮನಕಟ್ಟೆ ಸಮೀಪ ನಡೆದಿದೆ. ಗೌತಮ್ (27) ಮತ್ತು ಸಂಜಯ್ (25) ನಾಪತ್ತೆಯಾಗಿರುವ ಯುವಕರು. ಅದರಲ್ಲಿ ಗೌತಮ್ ಅವರ ಮೃತದೇಹವನ್ನು ನೀರಿನಿಂದ ತೆಗೆಯಲಾಗಿದೆ. ಇನ್ನೋರ್ವ ಯುವಕನ ಪತ್ತೆಗಾಗಿ ಶೋಧ ಕಾರ್ಯಚರಣೆ ನಡೆಸುತ್ತಿದ್ದಾರೆ.

 

ಇದನ್ನೂ ಓದಿ; ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು

ಬೆಂಗಳೂರಿನಿಂದ ತೀರ್ಥಹಳ್ಳಿಗೆ ಪ್ರವಾಸ ಬಂದಿದ್ದ ಬೆಂಗಳೂರಿನ ಮೂವರು ಯುವಕರು ಭಾನುವಾರ ಭೀಮನಕಟ್ಟೆಗೆ ಹೋಗಿದ್ದರು. ಅಲ್ಲಿ ತುಂಗಾ ನದಿಗೆ ಈಜಲು ತೆರಳಿದ್ದಾರೆ. ಆದರೆ ಗೌತಮ್ ಮತ್ತು ಸಂಜಯ್ ನೀರಿನ ಸೆಳವಿಗೆ ಸಿಕ್ಕಿ ಕೊಚ್ಚಿಕೊಂಡು ಹೋಗಿದ್ದಾರೆ. ಅವರ ಜೊತೆಗಿದ್ದ ಗಿರೀಶ್ ಮತ್ತು ಸ್ಥಳದಲ್ಲಿದ್ದ ಸ್ಥಳೀಯರು ಕೂಡಲೇ ಪೊಲೀಸರು ಮತ್ತು ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದರು.

 

ಇದನ್ನೂ ಓದಿ; ಕೊಪ್ಪ: ಫೋಟೋ ವೈರಲ್ ಹಿನ್ನಲೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ; ಮುಸ್ಲಿಂ ಯುವಕರ ಜೊತೆ ಹೋಗಿದ್ದಾಳೆಂದು ನೈತಿಕ ಪೊಲೀಸ್ ಗಿರಿ

ಇನ್ನೋರ್ವ ಯುವಕನ ಪತ್ತೆಗಾಗಿ ಶೋಧ ಕಾರ್ಯಚರಣೆ ನಡೆಯುತ್ತಿದ್ದು, ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ಕಾರು ಪಲ್ಟಿ | ಪ್ರಾಣಾಪಾಯದಿಂದ ಪಾರು

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಫಿ ತೋಟಕ್ಕೆ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರಿನಲ್ಲಿ ನಡೆದಿದೆ.

ಕೊಟ್ಟಿಗೆಹಾರದಿಂದ ಬಾಳೂರಿಗೆ ತೆರಳುತ್ತಿದ್ದ ಕಾರು. ಚಾಲಕನ ನಿಯಂತ್ರಣ ತಪ್ಪಿ ಬಾಳೂರಿನ ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ಅಜ್ಜಿ ಕುಡಿಗೆ ತೋಟಕ್ಕೆ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರಿಗೆ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.  ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

ಚಿಕ್ಕಮಗಳೂರು: ಕೋಳಿ ಮಾಂಸಕ್ಕೆ ದರ ನಿಗದಿಪಡಿಸಿದ ಪಂಚಾಯಿತಿ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕೋಳಿ ಮಾಂಸದ ಅಂಗಡಿಗಳಲ್ಲಿ ಹೆಚ್ಚಿನ ದರಕ್ಕೆ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂದು ದೂರು ಬಂದ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಗ್ರಾಮ ಪಂಚಾಯಿತಿಯವರೇ ಪ್ರತಿ ನಿತ್ಯ ದರ ನಿಗದಿ ಮಾಡುವಂತಹ ಪರಿಪಾಠ ಆರಂಭಗೊಂಡಿದೆ.

ಹೆಚ್ಚಿನ ಬೆಲೆಗೆ ಮಾಂಸ ಮಾರಾಟ ಆರೋಪ:
ಕಳಸ ಪಟ್ಟಣದ ಕೋಳಿ ಮಾಂಸದ ಅಂಗಡಿಗಳಲ್ಲಿ ಸುತ್ತಲಿನ ಊರುಗಳಿಗಿಂತ ಹೆಚ್ಚಿನ ಬೆಲೆಗೆ ಮಾಂಸ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪದ ಹಿನ್ನಲೆ ಗಂಭೀರವಾಗಿ ಪರಿಗಣಿಸಿದ ಗ್ರಾಮ ಪಂಚಾಯಿತಿ ಎಲ್ಲ ಕೋಳಿ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಿದ್ದರು. ದಿನಪತ್ರಿಕೆಯಲ್ಲಿ ಪ್ರಕಟವಾಗುವ ದರದ ಅನುಗುಣವಾಗಿ ಪ್ರತಿದಿನವೂ ಕೋಳಿ ಮಾಂಸ ಮಾರಾಟ ಮಾಡಬೇಕು. ತಪ್ಪಿದರೆ ಅಂಗಡಿ ಮಾಲೀಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

 

ಪ್ರತಿದಿನ ಪತ್ರಿಕೆಯಲ್ಲಿ ಪ್ರಕಟವಾಗುವ ಕೋಳಿ ಧಾರಣೆ ನೋಡಿಕೊಂಡು ಪಂಚಾಯಿತಿಯ ಸಿಬ್ಬಂದಿ ಕೋಳಿ ಮಾರುಕಟ್ಟೆಯಲ್ಲಿರುವ ಬೋರ್ಡ್ ನಲ್ಲಿ ಪ್ರತಿ ಕೆ.ಜಿ. ಕೋಳಿ ದರವನ್ನು ನಮೂದಿಸಿ ಬರುತ್ತಾರೆ. ಆ ದರದಲ್ಲಿಯೇ ಎಲ್ಲ ವರ್ತಕರು ಕೋಳಿ ಮಾರಾಟ ಮಾಡಬೇಕಿದೆ. ಅಂಗಡಿ ಮಾಲೀಕರು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಮೊತ್ತ ಪಡೆದರೆ ಪಂಚಾಯಿತಿಗೆ ದೂರು ನೀಡುವಂತೆಯೂ ಸಾರ್ವಜನಿಕರಿಗೆ ಕೋರಲಾಗಿದೆ.

ಇನ್ನು ಗ್ರಾಮ ಪಂಚಾಯಿತಿಯ ಈ ಕ್ರಮಕ್ಕೆ ಕೋಳಿ ಅಂಗಡಿ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಿನಪತ್ರಿಕೆಯಲ್ಲಿ ಪ್ರಕಟವಾಗುವ ಬೆಲೆಗೆ ಮಾಂಸ ಮಾರಾಟ ಮಾಡಿದರೆ ನಮಗೆ ನಷ್ಟವಾಗುತ್ತದೆ. ಕೋಳಿ ದರ ಹೆಚ್ಚಾಗಿದೆ. ಮಳಿಗೆಗಳ ಬಾಡಿಗೆಯೂ ದುಬಾರಿ ಇದೆ. ಹಾಗಾಗಿ ಸ್ಪರ್ಧಾತ್ಮಕ ದರದಲ್ಲಿ ಮಾರಾಟ ಮಾಡಲು ಅವಕಾಶ ನೀಡಬೇಕು ಎಂದು ಕೋರುತ್ತಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.