ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) 2024 ರ ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದ್ದು, ಈ ನಡುವಲ್ಲೇ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಪಡೆಯಲು ಹಲವರ ಹೆಸರುಗಳು ಕೇಳಿಬರುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ಸಿ.ಟಿ ರವಿ ಹಾಗೂ ಶೋಭಾ ಕರಂದ್ಲಾಜೆ ಕಾರ್ಯಕರ್ತರ ವಾರ್ ನಡುವೆ, ಇದೀಗ ಡಿಎನ್ ಜೀವರಾಜ್ ಅವರ ಕಾರ್ಯಕರ್ತರು ಪೋಸ್ಟ್ ಹಂಚಿಕೊಳ್ಳುವ ಮೂಲಕ ಉಡುಪಿ ಚಿಕ್ಕಮಗಳೂರು ಟಿಕೆಟ್ ಜೀವರಾಜ್ ನೀಡುವಂತೆ ಹಂಚಿಕೊಂಡಿದ್ದಾರೆ. ಡಿಸಿ ಶಿವಕಂಠಪ್ಪನವರ ನಂತರ ಚಿಕ್ಕಮಗಳೂರು ಜಿಲ್ಲೆಗೆ ಬಿಜೆಪಿಯ ಎಂಪಿ ಅಭ್ಯರ್ಥಿಯನ್ನು ಸ್ಥಳೀಯರಿಗೆ ನೀಡಿಲ್ಲ ಆದ ಕಾರಣ ಈ ಬಾರಿ ಉಡುಪಿ ಚಿಕ್ಕಮಗಳೂರು ಹಿರಿಯ ಬಿಜೆಪಿ ನಾಯಕ ಡಿಎನ್ ಜೀವರಾಜ್ ಕ್ಷೇತ್ರಕ್ಕೆ ಎಂಪಿ ಟಿಕೆಟ್ ನೀಡಬೇಕೆಂದು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಇನ್ನು ಲೋಕಸಭಾ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಸಿ.ಟಿ.ರವಿ, ಡಿ.ಎನ್.ಜೀವರಾಜ್ ಕೂಡ ಸೇರಿದ್ದಾರೆ. ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಕಾರ್ಯಕರ್ತರು ಸಿ.ಟಿ ರವಿ ಅವರನ್ನು ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯಿಸಿದ್ದು, ಇದಕ್ಕೆ ಸಿ.ಟಿ ರವಿಯವರು ಮೌನ ಒಪ್ಪಿಗೆ ನೀಡಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ; ಸ್ವಂತ ಉದ್ಯೋಗ ಮಾಡುವ ಆಸಕ್ತಿ ಇದೆಯಾ?; ಸರ್ಕಾರವೇ ನೀಡುತ್ತೆ ನಿಮಗೆ ಸಹಾಯಧನ; ಇಲ್ಲಿದೆ ನೋಡಿ ಅರ್ಜಿ ಸಲ್ಲಿಕೆಯ ಮಾಹಿತಿ
ಇನ್ನು ಉಡುಪಿಯ ಮಧ್ವರಾಜ್ ಅವರು, ಕಳೆದ ಎರಡು ತಿಂಗಳಿಂದ ಜಿಲ್ಲೆಯಲ್ಲಿ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವುದು ಕಂಡು ಬಂದಿದೆ. ಪಕ್ಷದ ಹೈಕಮಾಂಡ್ ಒಪ್ಪಿಗೆ ನೀಡಿದರೆ ಸ್ಪರ್ಧೆಗೆ ಸಿದ್ದ ಎಂಬುದನ್ನು ಪರೋಕ್ಷವಾಗಿ ಈ ಮೂಲಕ ಹೇಳುವ ಪ್ರಯತ್ನ ಮಾಡಿದ್ದರು.
ಹಾಲಿ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬಿಜೆಪಿ ಕಾರ್ಯಕರ್ತರ ಒಂದು ಬಣದ ಗೋ ಬ್ಯಾಕ್ ಶೋಬಾ ಅಭಿಯಾನ ತೀವ್ರಗೊಳ್ಳುತ್ತಿದ್ದಂತೆಯೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಧ್ಯೆ ಪ್ರವೇಶಿಸಿ ವಿರೋಧಿ ಬಣಕ್ಕೆ ಶಾಕ್ ಕೊಟ್ಟಿದ್ದಾರೆ. ಇನ್ನು ಮೂರು ದಿನದ ಒಳಗೆ ಎಲ್ಲವೂ ಗೊತ್ತಾಗುತ್ತೆ. ೩ ದಿನದಲ್ಲಿ ಮೊದಲ ಪಟ್ಟಿ ಬಿಡುಗಡೆ ಆಗಬಹುದು. ಶೋಭಾ ಕರಂದ್ಲಾಜೆ ಮೋದಿ ಸಂಪುಟದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಈ ಬಾರಿಯೂ ಶೋಭಾ ಕರಂದ್ಲಾಜೆ ಗೆಲ್ಲುತ್ತಾರೆ ಎಂದು ಬಿಎಸ್ವೈ ಹೇಳಿದರು. ಈ ಮೂಲಕ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಉಡುಪಿ-ಚಿಕ್ಕಮಗಳೂರು ಟಿಕೆಟ್ ಎನ್ನುವುದನ್ನು ಖಚಿತಪಡಿಸಿದರು.
ಇದನ್ನೂ ಓದಿ; ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; ಈ ದಿನ ಬರಲಿದೆ 16 ಕಂತಿನ ಹಣ
ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಪಕ್ಷದಲ್ಲಿ ಭಾರೀ ಪೈಪೋಟಿ ನಡೆಯುತ್ತಿದೆ. ಅದರಲ್ಲೂ ಮುಖ್ಯವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಮಾಜಿ ಶಾಸಕ ಸಿಟಿ ರವಿ ಬಣಗಳ ನಡುವಣ ಸಂಘರ್ಷ ತಾರಕಕ್ಕೇರಿದೆ. ಈ ಬಾರೀ ಟಿಕೆಟ್ ಯಾರಿಗೆ ಎಂಬುದು ಕಾದು ನೋಡಬೇಕಿದೆ.












