ರಂಗೇರಿದ ಚಿಕ್ಕಮಗಳೂರು – ಉಡುಪಿ ಲೋಕಸಭಾ ಕ್ಷೇತ್ರದ ಚುನಾವಣಾ ಕಣ

ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಮೊದಲ ಹಂತದಲ್ಲಿ ಏ.26 ರಂದು ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಹಾಗೂ ಪಕ್ಷೇತರರು ಸೇರಿದಂತೆ ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ; ಜನಸಾಮಾನ್ಯರಿಗೆ ಗುಡ್ ನ್ಯೂಸ್; ಗಗನಕ್ಕೇರಿದ್ದ ಅಕ್ಕಿ ದರ ಇಳಿಕೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್ ಬೆಂಬಲಿತ ಬಿ.ಜೆ.ಪಿ. ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ ಪೂಜಾರಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಇಂದು ಬೆಳಿಗ್ಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಕಾರ್ಯಕರ್ತರ, ಬೆಂಬಲಿಗರ ಬೃಹತ್ ಸಮಾವೇಶ ಏರ್ಪಡಿಸಿ, ನಂತರ ಮೆರವಣಿಗೆಯಲ್ಲಿ ಸಾಗಿ ಚುನಾವಣಾಧಿಕಾರಿ ವಿದ್ಯಾಕುಮಾರಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಇದನ್ನೂ ಓದಿ; ಯಾವುದೇ ಪರೀಕ್ಷೆ ಇಲ್ಲದೇ ಅಂಚೆ ಪೇಮೆಂಟ್ ಬ್ಯಾಂಕ್‌ ನಲ್ಲಿ ಉದ್ಯೋಗ; 47 ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಇಂದು ಬೆಳಿಗ್ಗೆ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿದ ಬಳಿಕ ನೂರಾರು ಕಾರ್ಯಕರ್ತರ ಜೊತೆ ತೆರಳಿ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಇದನ್ನೂ ಓದಿ; ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್; ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

ಇನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕರುನಾಡ ಸೇವಕರ ಪಕ್ಷದ ಅಭ್ಯರ್ಥಿಯಾಗಿ ಶಬರೀಶ್ ಆರ್ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಎಲ್ ರಂಗನಾಥ್ ಗೌಡ ನಾಮಪತ್ರ ಸಲ್ಲಿಸಿದರು.

ಮೂಡಿಗೆರೆ: ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಹೆಬ್ಬರಿಗೆಯ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಇದನ್ನೂ ಓದಿ; ಇಂದಿನಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ; ಹೊಸ ಪಡಿತರ ಚೀಟಿ ಪಡೆಯಲು ಇನ್ಮುಂದೆ ಸರ್ಕಾರದ ಹೊಸ ನಿಯಮ!

ಧರ್ಮಸ್ಥಳ ದಿಂದ ದರ್ಶನ ಮುಗಿಸಿ ಬೆಂಗಳೂರಿಗೆ ಹೋಗುತ್ತಿದ್ದ ಬೊಲೆರೋ ವಾಹನ ಹಾಗೂ ಚಿಕ್ಕಮಗಳೂರಿನಿಂದ ಬಿಳಗಲಿಗೆ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಬೊಲೆರೋ ಜೀಪ್ ನಲ್ಲಿದ್ದ ಮೂವರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ; ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ!;ಕೃಷಿ ಭೂಮಿ ಹೊಂದಿರುವ ಈ ರೈತರಿಗೆ ಸಿಗಲಿದೆ ಸಹಾಯಧನ

ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ; bsnl​ ಕಂಪನಿಯಲ್ಲಿ ಭರ್ಜರಿ ಉದ್ಯೋಗ; 558 ಹುದ್ದೆಗಳಿಗೆ ಅರ್ಜಿ ಅಹ್ವಾನ; 24,900-50,500 ಇದೇ ಸಂಬಳ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.