ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ತಾಲ್ಲೂಕಿನ ಆಯನೂರು ಸಮೀಪದ ವೀರಗಾರನ ಬೈರನಕೊಪ್ಪ ಬಳಿ ಸೋಮವಾರ ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶಿವಮೊಗ್ಗ ನಗರದ ಗಾಡಿಕೊಪ್ಪ ನಿವಾಸಿ ವೀರೇಶ್ (28) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ವೀರೇಶ್ ಅವರು ಬೆಳಗಿನ ಜಾವ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಕ್ಕಿ ಹೊಡೆದು ಪರಾರಿಯಾದ ವಾಹನ ಮತ್ತು ಅದರ ಚಾಲಕನ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
















