ಅಡಿಕೆ ಬೆಳೆಗಾರರಿಗೆ ದೊಡ್ಡ ಭರವಸೆ ನೀಡಿದ ಕೇಂದ್ರ ಸಚಿವ

ಸಾಗರ:  (ನ್ಯೂಸ್ ಮಲ್ನಾಡ್ ವರದಿ) ಹಲವು ಸಮಸ್ಯೆಗಳಿಂದ ರಾಜ್ಯದ ಅಡಿಕೆ ಬೆಳೆಗಾರರು ಕಂಗೆಟ್ಟಿದ್ದಾರೆ. ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆ ಲಕ್ಷಾಂತರ ಮಂದಿಯ ಜೀವನಾಧಾರವಾಗಿದೆ. ಅಡಿಕೆ ಬೆಲೆ ಕುಸಿತ, ಮಾರಕ ರೋಗಗಳು ಅಡಿಕೆ ಬೆಳೆಗಾರರನ್ನು ಸಂಕಷ್ಟಕ್ಕೆ ಸಿಲುಕಿಸಿವೆ. ಆತಂಕದಲ್ಲಿರುವ ಅಡಿಕೆ ಬೆಳೆಗಾರರಿಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಈಗ ಭರವಸೆಯೊಂದನ್ನು ನೀಡಿದ್ದಾರೆ.


ಇದನ್ನೂ ಓದಿ: ಜೀವವಿಲ್ಲದ ದೇಹಗಳೊಂದಿಗೆ ಅಘೋರಿಗಳ ಜೀವನ…!; ಅಘೋರಿಗಳ ವಿಚಿತ್ರ ಜೀವನ ಶೈಲಿ ಕೇಳಿದ್ರೆ ಬೆಚ್ಚಿ ಬೀಳ್ತೀರಾ!


ಬೆಳೆಗಳಿಗೆ ತಕ್ಕ ಬೆಲೆ:
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದ ಸಾಗರ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಅಡಿಕೆ ಆಮದು ತಡೆಗೆ ಕಠಿಣ ಕ್ರಮ ತೆಗೆದುಕೊಳ್ಳುವ ಜೊತೆಗೆ ಅಡಿಕೆಗೆ ವೈಜ್ಞಾನಿಕ ಬೆಲೆ ಸಿಗುವಂತೆ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ. ರೈತರ ಬೆಳೆಗಳಿಗೆ ತಕ್ಕ ಬೆಲೆ ಸಿಗಬೇಕು, ಬೆಳೆ ಹಾನಿಯಾದಾಗ ಪರಿಹಾರ ನೀಡಬೇಕು. ಮಧ್ಯವರ್ತಿಗಳನ್ನು ತಪ್ಪಿಸಿ ರೈತರಿಗೆ ತಮ್ಮ ಬೆಳೆಗಳಿಗೆ ಸರಿಯಾದ ಬೆಲೆ ಸಿಗುವಂತೆ ಮಾಡಲು ನಾವು ಬದ್ದರಾಗಿದ್ದೇವೆ ಎಂದರು.

ಅಡಿಕೆ ಬೆಳೆಗಾರರು ಕಷ್ಟದಲ್ಲಿದ್ದಾರೆ ಎಂದಿದ್ದಕ್ಕೆ ನಾನು ಇಲ್ಲಿಗೆ ಬಂದಿದ್ದೇನೆ. ಯಾವುದೇ ಪಕ್ಷದ ನಾಯಕನಾಗಿಯೋ, ಕೇಂದ್ರದ ಸಚಿವನಾಗಿ ಬಂದಿಲ್ಲ, ನಿಮ್ಮ ಸೇವೆ ಮಾಡಲು ಬಂದಿದ್ದೇನೆ. ಕೃಷಿ ಬಗ್ಗೆ ಕಾಳಜಿ ಇಲ್ಲದವರು ಕೃಷಿ ಸಚಿವರಾಗಬಾರದು ಎಂದರು.


ಇದನ್ನೂ ಓದಿ: ರಾಜ್ಯದ BPL ಕಾರ್ಡ್ ದಾರರಿಗೆ ಮುಖ್ಯಮಂತ್ರಿಯಿಂದ ಮುಖ್ಯ ಮಾಹಿತಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಯಾವ ಸರ್ಕಾರ ಅಧಿಕಾರದಲ್ಲಿದೆ ಎನ್ನುವುದು ಮುಖ್ಯವಲ್ಲ:
ಪ್ರತಿ ಮನೆಯಲ್ಲೂ ಅಡಿಕೆ ಬಳಕೆ ಮಾಡಲಾಗುತ್ತದೆ. ಪೂಜೆಯ ಸಂದರ್ಭದಲ್ಲಿ ಅಡಿಕೆಯನ್ನು ಬಳಸುತ್ತೇವೆ, ಅಡಿಕೆಗೆ ದೇವರ ಸ್ಥಾನ ನೀಡಲಾಗುತ್ತದೆ. ಎಲ್ಲಾ ಕ್ಷೇತ್ರಗಳಲ್ಲಿ ಅಡಿಕೆಯ ಬಳಕೆಯಿದೆ. ನಾನು ಕೃಷಿ ಮಂತ್ರಿಯನ್ನು ಭೇಟಿಯಾಗಿ ಬಂದಿದ್ದೇನೆ, ಯಾವ ಸರ್ಕಾರ ಅಧಿಕಾರದಲ್ಲಿದೆ ಎನ್ನುವುದು ಮುಖ್ಯವಲ್ಲ ರೈತರ ಸಮಸ್ಯೆ ಬಗೆಹರಿಸುವುದು ನಮ್ಮ ಮೊದಲ ಆದ್ಯತೆ ಎಂದರು.

ಸಂಶೋಧನೆಗೆ ತಂಡ ರಚನೆ
ಅಡಿಕೆ ಬೆಳೆಗೆ ರೋಗಗಳ ಹಾವಳಿ ಜಾಸ್ತಿಯಾಗುತ್ತಿದ್ದು ಬೆಳೆಗಾರರನ್ನು ಸಂಕಷ್ಟಕ್ಕೆ ದೂಡಿದೆ. ಹಲವು ಅಡಿಕೆ ಬೆಳೆಗಾರರು ಈಗಾಗಲೇ ನಷ್ಟದ ಸುಳಿಗೆ ಸಿಲುಕಿದ್ದಾರೆ. ಈ ವರ್ಷ ರೋಗದಿಂದ ಅಡಿಕೆ ಬೆಳೆ ಮೇಲೆ ಹೆಚ್ಚಿನ ಹಾನಿಯಾಗಿದೆ. ಅಡಿಕೆ ಬೆಳೆಯನ್ನು ಬಾಧಿಸುವ ರೋಗಗಳನ್ನು ಸಂಶೋಧನೆ ನಡೆಸಿ ಪರಿಹಾರ ಕಂಡುಕೊಳ್ಳಲು ತಂಡ ರಚನೆ ಮಾಡಲಾಗುವುದು. ಇದಕ್ಕಾಗಿ ಈ ಬಾರಿ ಬಜೆಟ್‌ನಲ್ಲಿ ಹಣ ಮೀಸಲಿಡಲಾಗುವುದು ಎಂದು ಹೇಳಿದರು.


ಇದನ್ನೂ ಓದಿ: ಸ್ಕೂಲ್‌ ಬಸ್‌ಗೆ ಹಳದಿ ಕಲರ್‌ ಯಾಕೆ ಇರುತ್ತೆ ಗೊತ್ತಾ!; ಇದರ ಹಿಂದಿದೆ ರಹಸ್ಯ ಸಂದೇಶ!


ಅಡಿಕೆಯಿಂದ ಕ್ಯಾನ್ಸರ್ ಬರಲ್ಲ:
ಅಡಿಕೆ ಸೇವನೆಯಿಂದ ಕ್ಯಾನ್ಸರ್ ಬರುತ್ತದೆ ಎನ್ನುವ ವದಂತಿಯನ್ನು ಹಬ್ಬಿಸಲಾಗಿದೆ. ನಮ್ಮ ಪೂರ್ವಜರ ಕಾಲದಿಂದಲೂ ಜನ ಅಡಿಕೆ ತಿನ್ನುತ್ತಿದ್ದಾರೆ. ಅಡಿಕೆ ಸೇವನೆ ಪರಿಣಾಮಗಳ ಬಗ್ಗೆ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಈಗಾಗಲೇ 16 ಸಂಸ್ಥೆಗಳಿಗೆ ಸೂಚಿಸಲಾಗಿದ್ದು, ಅಡಿಕೆ ಸೇವನೆಯಿಂದ ಯಾವುದೇ ಸಮಸ್ಯೆಯಿಲ್ಲ, ಈ ಬಗ್ಗೆ ಇರುವ ವದಂತಿಗಳಿಗೆ ಸ್ಪಷ್ಟನೆ ನೀಡಲಾಗುವುದು ಎಂದು ಭರವಸೆ ನೀಡಿದರು.


ಇದನ್ನೂ ಓದಿ: SC-ST ನೇಮಕಾತಿ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; ಆದೇಶದಲ್ಲಿ ಏನಿದೆ ಗೊತ್ತಾ? ಇಲ್ಲಿದೆ ನೋಡಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.