ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡಲ್ಲಿ ಗಾಳಿಯ ಅಬ್ಬರಕ್ಕೆ ಬುಡಸಮೇತ ಬೃಹತ್ ಮರವೊಂದು ಧರೆಗುರುಳಿದೆ.
ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ

ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ಈ ಘಟನೆ ನಡೆದಿದ್ದು, ವಸ್ತಾರೆ ಬಳಿ ರೋಡ್ ಬ್ಲಾಕ್
ಆಗಿದೆ. ಇದರಿಂದ ಬಾಳೆಹೊನ್ನೂರು, ಶೃಂಗೇರಿ, ಕೊಪ್ಪ, ಕಳಸ, ಎನ್.ಆರ್.ಪುರದ ಮಾರ್ಗ ಕೂಡ ಬಂದ್ ಆಗಿದೆ. ಸ್ಥಳೀಯರು, ಅರಣ್ಯ ಇಲಾಖೆ ಅಧಿಕಾರಿಗಳಿಂದ ತೆರವು ಕಾರ್ಯ ನಡೆಸಿದ್ದು, ಒಂದು ಗಂಟೆಗೂ ಹೆಚ್ಚು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದೆ.
ಇದನ್ನೂ ಓದಿ: 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆ:
ಮಲೆನಾಡಿನಲ್ಲಿ ನಿರಂತರ ಸುರಿಯುತ್ತಿರುವ ಮಳೆಗೆ ಮಲೆನಾಡಿಗರು ಹೈರಾಣಾಗಿದ್ದು, ಕಳಸ-ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆಯಾಗಿದೆ.
ಇದನ್ನೂ ಓದಿ: ಈ ತಾಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ
ಹೌದು, ಕುದುರೆಮುಖ ಘಟ್ಟ ಪ್ರದೇಶದಲ್ಲಿ ಕಳೆದ ರಾತ್ರಿಯಿಂದ ಧಾರಾಕಾರ ಮಳೆ ಸುರಿ ಪರಿಣಾಮ ಕಳಸ-ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಕಳೆದ 15 ದಿನದಲ್ಲಿ 10ಕ್ಕೂ ಹೆಚ್ಚು ಬಾರಿ ಈ ಸೇತುವೆ ಮುಳುಗಡೆಯಾಗಿದ್ದು, ಇದರಿಂದ ಹತ್ತಾರು ಹಳ್ಳಿಯ ಸಂಪರ್ಕ ಕಡಿತವಾಗಿದೆ. ಅಲ್ಲದೆ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವು ಬಂದ್ ಆಗಿದೆ.
ಇದನ್ನೂ ಓದಿ: ಈ 14 ಜಿಲ್ಲೆಗಳಿಗೆ ಗೃಹಲಕ್ಷ್ಮಿ ಹಣ ಇಂದು ರಿಲೀಸ್.!; ಆದರೆ, ಈ ಕೆಲಸ ಮಾಡುವುದು ಕಡ್ಡಾಯ












