ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರಿನಿಂದ ಶೃಂಗೇರಿಗೆ ಸಂಚರಿಸುವ ರಸ್ತೆ ಸಾರಿಗೆ ನಿಗಮದ ಬಸ್‍ಗಳ ಆಸನದಲ್ಲಿ ನಿತ್ಯವೂ ತರಕಾರಿ ಸಾಗಾಟ ಮಾಡುತ್ತಿದ್ದು, ಇದರಿಂದ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ ಎಂದು ಸಾರ್ವಜನಿಕರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ದೂರು ನೀಡಿದ್ದಾರೆ.
ಇದನ್ನೂ ಓದಿ; ಗ್ರಾಪಂ ನೌಕರರ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!

ಬೆಳಗ್ಗಿನ ಸಮಯದಲ್ಲಿ ಸಂಚರಿಸುವ ಬಸ್‌ನ ಹಿಂಭಾಗದ ಮೂರು- ನಾಲ್ಕು ಆಸನಗಳಲ್ಲಿ ಚಿಕ್ಕಮಗಳೂರಿನಿಂದ ಜಯಪುರದ ಕೆಲವು ಅಂಗಡಿಗಳಿಗೆ ತರಕಾರಿಯನ್ನು ಚೀಲದಲ್ಲಿ ತುಂಬಿಸಿ ಇಡಲಾಗುತ್ತದೆ. ಕಡಬಗೆರೆ, ಸಂಗಮೇಶ್ವರಪೇಟೆ, ಬಾಳೆಹೊನ್ನೂರಿನಿಂದಲೇ ಬಸ್‌ನಲ್ಲಿ ಪ್ರಯಾಣಿಕರು, ವಿದ್ಯಾರ್ಥಿಗಳು ತುಂಬಿ ತುಳುಕುತ್ತಿರುತ್ತದೆ.
ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಭರ್ಜರಿ ಸುದ್ದಿ; ಡ್ರೈವಿಂಗ್ ಸೇರಿ ವಿವಿಧ ತರಬೇತಿಗೆ ಅರ್ಜಿ ಆಹ್ವಾನ!
ಈ ಮಧ್ಯೆ ತರಕಾರಿ ಮೂಟೆಗಳಿಂದಾಗಿ ಸೀಗೋಡು, ಹೇರೂರು, ದೂಬಳ ಕೈಮರ, ಜಯಪುರದಿಂದ ಶೃಂಗೇರಿಯ ಶಾಲಾ- ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಬಸ್ ನಿಲುಗಡೆ ಮಾಡುತ್ತಿಲ್ಲ. ಇದರಿಂದಾಗಿ ಹಲವು ಬಾರಿ ವಿದ್ಯಾರ್ಥಿಗಳಿಗೆ ಪರೀಕ್ಷೆ, ತರಗತಿಗಳು ತಪ್ಪಿಹೋಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ; ರೇಷನ್ ಕಾರ್ಡ್ ಪಡೆಯಲು ಇರುವ ಮಾನದಂಡಗಳೇನು?; ಇಲ್ಲಿದೆ ನೋಡಿ ಮಾಹಿತಿ
ಸಾರ್ವಜನಿಕರ ಯಾವುದೇ ಸಮಸ್ಯೆಗೆ ಸಂಸ್ಥೆಯ ಚಿಕ್ಕಮಗಳೂರಿನ ವಿಭಾಗೀಯ ನಿಯಂತ್ರಣಾಧಿಕಾರಿ ಸರಿಯಾಗಿ ಸ್ಪಂದಿಸುತ್ತಿಲ್ಲ. ಇದರ ಬಗ್ಗೆಯೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಾರಿಗೆ ಸಚಿವರಿಗೆ ದೂರು ನೀಡಲು ತೀರ್ಮಾನಿಸಿದ್ದಾರೆ.












