ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕ್ರಿಕೆಟ್ ಆಡಲು ಬಂದಿದ್ದ ಪಶುವೈದ್ಯ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸೋಮವಾರ ಪೇಟೆ ಪಶುವೈದ್ಯರಾಗಿದ್ದ ಶಿವಪ್ಪ ಬಾದಾಮಿ ಹೃದಯಾಘಾತದಿಂದ ಮೃತಪಟ್ಟ ವೈದ್ಯ.
ಇದನ್ನೂ ಓದಿ; 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ

ವಿಭಾಗ ಮಟ್ಟದ ಕ್ರಿಕೆಟ್ ಕ್ರೀಡಾಕೂಟಕ್ಕೆ ಆಗಮಿಸಿದ್ದ ಪಶುವೈದ್ಯ ಕ್ರಿಕೆಟ್ ಆಡಿ ಫೋಟೋ ಸೆಷೆನ್ ನಲ್ಲಿ ಪಾಲ್ಗೊಂಡು ನಂತರ ಕ್ರಿಕೆಟ್ ನೋಡುತ್ತಿದ್ದಂತೆ ಕುಳಿತಲ್ಲಿಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಇತರೆ ವೈದ್ಯರು ಚಿಕಿತ್ಸೆಗೆ ಮುಂದಾದರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
ಶಿವಪ್ಪ ಬಾದಾಮಿ ಅಕಾಲಿಕ ಮರಣಕ್ಕೆ ಪಶುವೈದ್ಯ ಲೋಕದ ಕಂಬನಿ ಮಿಡಿದಿದ್ದು, ಕ್ರೀಡಾಕೂಟವನ್ನು ಸ್ಥಗಿತಗೊಳಿಸಲಾಯಿತು. ಶಿವಪ್ಪ ಬಾದಾಮಿಯವರ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಮೂಡಿಗೆರೆ: ಕಂಠಪೂರ್ತಿ ಕುಡಿದು ರಸ್ತೆಯ ಮದ್ಯೆ ಮಲಗಿದ ಭೂಪ
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕಂಠಪೂರ್ತಿ ಕುಡಿದು ರಸ್ತೆಯ ಮದ್ಯೆ ವ್ಯಕ್ತಿಯೋರ್ವ ಮಲಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರಕ್ಕೆ ಹೋಗುವ ರಸ್ತೆ ಹಳಸೆ ಗ್ರಾಮದ ತಿರುವಿನಲ್ಲಿ ನಡೆದಿದೆ.
ರಸ್ತೆಯಲ್ಲಿ ವ್ಯಕ್ತಿ ಮಲಗಿರುವುದನ್ನು ನೋಡಿ ವಾಹನ ಸವಾರರು ಬೆಚ್ಚಿ ಬಿದ್ದಿದ್ದು, ವಾಹನ ಚಾಲಕರು ಎಷ್ಟೇ ಹಾರ್ನ್ ಮಾಡಿದರೂ ಮೇಲಕ್ಕೆ ಏಳದ ಭೂಪ, ಕೆಲ ಕಾಲ ಆತಂಕ ಸೃಷ್ಟಿಸಿದ್ದಾನೆ. ವಾಹನದ ಹಾರ್ನ್ ಗೆ ಕೊನೆಗೂ ಎದ್ದ ವ್ಯಕ್ತಿ, ವಾಹನ ಹೋದ ನಂತರ ಮತ್ತೆ ಅದೇ ಜಾಗದಲ್ಲಿ ಮಲಗಿದ್ದಾನೆ. ವ್ಯಕ್ತಿಯ ಹುಚ್ಚಾಟದಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.
ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.












