ಕೊಪ್ಪ ವಿಪ್ರ ಮಹಿಳಾ ವೇದಿಕೆಯ ಮೂರನೇ ವರ್ಷದ ವಾರ್ಷಿಕ ಸಮಾರಂಭವು ಮಾರ್ಚ್ 1, 2026 ರ ಭಾನುವಾರದಂದು ಬೆಳಿಗ್ಗೆ 9.30 ಗಂಟೆಗೆ ಕೊಪ್ಪದ ಗಾಯತ್ರಿ ಸಾಂಸ್ಕೃತಿಕ ಸಭಾಭವನದಲ್ಲಿ ನಡೆಯಲಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಕಾರ್ಯಕ್ರಮಕ್ಕೆ ಹೊರನಾಡಿನ ಗಣ್ಯ ಅತಿಥಿಯಾಗಿಯಾಗಿ ರಾಜಲಕ್ಷ್ಮಿ ಜೋಷಿ ಆಗಮಿಸಲಿದ್ದು, ಸಂಸ್ಥೆಯ ಅಧ್ಯಕ್ಷೆ ಟಿ.ವಿ. ನಾಗರಾಜ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ವಾರ್ಷಿಕ ಸಮಾರಂಭದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಆಯೋಜಿಸಲಾಗಿದ್ದು, ಮಧ್ಯಾಹ್ನದ ನಂತರ ವಿಪ್ರ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಸ್ಥಳೀಯ ಹಾಗೂ ಸುತ್ತಮುತ್ತಲಿನ ವಿಪ್ರ ಮಹಿಳೆಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ.
ಈ ಸಮಾರಂಭದಲ್ಲಿ ಎಲ್ಲಾ ವಿಪ್ರ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ಕೋರಿದೆ.












