ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೃಂಗೇರಿ ಶೌರ್ಯ ವಿಪತ್ತು ನಿರ್ವಹಣಾ ಘಟಕ–2 ವತಿಯಿಂದ ನಿನ್ನೆ ಶೃಂಗೇರಿಯ ರಾಜಾನಗರ ಅಂಗನವಾಡಿ ಕೇಂದ್ರದ ಸುತ್ತಮುತ್ತ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಅಂಗನವಾಡಿ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿ ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಶ್ರಮದಾನದ ಮೂಲಕ ಸಾರ್ವಜನಿಕ ಸ್ಥಳಗಳ ಸ್ವಚ್ಛತೆಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ ಸದಸ್ಯರ ಕಾರ್ಯಕ್ಕೆ ಸ್ಥಳೀಯ ನಿವಾಸಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.


ಈ ಸಮಾಜಮುಖಿ ಕಾರ್ಯದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಮನೋಭಾವದ ಕುರಿತು ಸ್ಥಳೀಯ ಜನರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಇಂತಹ ಶ್ರಮದಾನ ಮತ್ತು ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಮುಂದೆಯೂ ನಿರಂತರವಾಗಿ ಆಯೋಜಿಸುವಂತೆ ಆಶಿಸಿದರು.

















