ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿ ಕರೆ ನೀಡಿರುವ ಬಂದ್ಗೆ ಶೃಂಗೇರಿ ಕ್ಷೇತ್ರದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಇಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಂದ್ ಗೆ ಸಂಘಟನೆಗಳು ಕರೆ ನೀಡಿದ್ದವು. ಬಂದ್ಗೆ ಬೆಂಬಲ ಸೂಚಿಸಿ ಅಂಗಡಿ ಮುಂಗಟ್ಟುಗಳು ಸ್ವಯಂಪ್ರೇರಿತವಾಗಿ ಮುಚ್ಚಲ್ಪಟ್ಟಿದ್ದು, ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ. ಸಾರ್ವಜನಿಕ ಸಾರಿಗೆ ಹಾಗೂ ಖಾಸಗಿ ವಾಹನ ಸಂಚಾರದಲ್ಲೂ ಗಣನೀಯ ಪ್ರಮಾಣದ ಕುಂಠಿತ ಕಂಡುಬಂದಿದೆ.
ಶೃಂಗೇರಿ ಕ್ಷೇತ್ರದ ಶೃಂಗೇರಿ, ಎನ್. ಆರ್.ಪುರ, ಕೊಪ್ಪ ತಾಲೂಕುಗಳಲ್ಲಿ ಸಂಪೂರ್ಣ ಬಂದ್ ಯಶಸ್ವಿಯಾಗಿ ನಡೆಯುತ್ತಿದೆ. ಜೊತೆಗೆ ಚಿಕ್ಕಮಗಳೂರು ಜಿಲ್ಲೆಯ ಖಾಂಡ್ಯ ಹೋಬಳಿ ವ್ಯಾಪ್ತಿಯಲ್ಲಿಯೂ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮೂರು ತಾಲೂಕುಗಳಲ್ಲಿಯೂ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು ಭಾಗಶಃ ಕಾರ್ಯನಿರ್ವಹಿಸಿದ್ದರೂ, ವ್ಯಾಪಾರ ವಲಯ ಸಂಪೂರ್ಣವಾಗಿ ಬಂದ್ಗೆ ಕೈಜೋಡಿಸಿದೆ.












