ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಬಡಗಬೈಲು ಗ್ರಾಮದಲ್ಲಿ ನಿನ್ನೆ ಕಾಡಾನೆಗಳು ತೋಟಗಳಿಗೆ ದಾಳಿ ಮಾಡಿ ಬೆಳೆಗಳು ನಾಶ ಮಾಡಿದೆ. ಅಲ್ಲದೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಓಡಾಟ ಮಾಡುತ್ತಿದ್ದು, ಜನರು ಭಯದ ವಾತಾವರಣದಲ್ಲಿದ್ದಾರೆ.
ಇದನ್ನೂ ಓದಿ: ಮುದ್ರಾ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ

ಕಾಡಾನೆ ದಾಳಿಗೆ ರೈತರೋ, ಸಾರ್ವಜನಿಕರೋ ಮೃತರಾದಾಗ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಚೆಕ್ ಹಿಡಿದುಕೊಂಡು ಬಂದು, ಕುಟುಂಬದವರಿಗೆ ಸಾಂತ್ವನದ ಮಾತನಾಡಿ ಒಂದು ವಾರದಲ್ಲಿ ಕಾಡಾನೆ ಓಡಿಸುತ್ತೇವೆ ಎಂಬ ಸುಳ್ಳು ಭರವಸೆ ನೀಡುತ್ತಿದ್ದಾರೆ ಹೊರತು ಕಾಡಾನೆ ಸೆರೆ ಹಿಡಿಯುವ ಕಡೆಗೆಯಾಗಲಿ, ನಷ್ಟ ಅನುಭವಿಸಿದ ರೈತರಿಗೆ ಸೂಕ್ತ ಪರಿಹಾರ ಕೊಡುವ ಕಡೆಯಾಗಲಿ ಯಾವುದೇ ಗಮನ ನೀಡಿಲ್ಲ ಎಂದು ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: PUC ಪಾಸ್ ಆದ ವಿದ್ಯಾರ್ಥಿಗಳಿಗೆ 40,000 ಸ್ಕಾಲರ್ ಶಿಪ್; ನೇರ ನಿಮ್ಮ ಖಾತೆಗೆ ಜಮಾ!
ರೈತರ ತಾಳ್ಮೆ ಎಂಬ ಕಟ್ಟೆ ಒಡೆಯುವ ಮುನ್ನ ಕ್ಷೇತ್ರದ ಶಾಸಕರು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಕಾಡಾನೆಗಳ ಸೆರೆ ಹಿಡಿಯುವ ಯೋಜನೆ ರೂಪಿಸಿ ಬೇರೆಡೆಗೆ ಸ್ಥಳಾಂತರ ಮಾಡುವ ಕಡೆಗೆ ಕೂಡಲೇ ಕಾರ್ಯ ಪ್ರವೃತ್ತರಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.












