ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಲೆಕಾನ್ ಗ್ರಾಮದಲ್ಲಿ ದನ ಮೇಯಿಸಲು ಹೋದಾಗ ಕಾಡು ಹಂದಿ ದಾಳಿ ಮಾಡಿರುವ ಘಟನೆ ನಡೆದಿದೆ. ದಾಳಿಗೆ ಬೀಳಿದ ಅಲೆಕಾನ್ ಗ್ರಾಮದ ರೈತ ಉಪೇಂದ್ರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: 36,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ

ದನಗಳನ್ನು ಮೇಯಿಸಿ ಹಿಂತಿರುಗುತ್ತಿದ್ದ ವೇಳೆ ಬಂದ ಕಾಡು ಹಂದಿ ಕೈ ಮೇಲೆ ದಾಳಿ ನಡೆಸಿದ್ದು, ಕೈಯ ಒಂದು ಬೆರಳನ್ನು ತೀವ್ರವಾಗಿ ಕಚ್ಚಿ, ಬೆರಳು ಸಂಪೂರ್ಣವಾಗಿ ತುಂಡಾಗಿದೆ. ತಕ್ಷಣವೇ ಸ್ಥಳೀಯರಿಗೆ ಮಾಹಿತಿ ನೀಡಿ ಚಿಕಿತ್ಸೆ ಪಡೆದಿದ್ದಾರೆ. ಘಟನೆಯ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದರೂ ಕೂಡ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಬರಲಿಲ್ಲ ಎಂದು ಆರೋಪಿಸಿದ್ದಾರೆ.
“ನಾನು ಬಡ ರೈತನು. ಹೀಗೆ ಬೆರಳು ಕಟ್ ಆದ ಮೇಲೆ ಕೆಲಸ ಮಾಡುವ ಸಾಮರ್ಥ್ಯವೂ ಕಡಿಮೆಯಾಗಿದೆ. ನನ್ನ ಕುಟುಂಬ ನಿರೀಕ್ಷೆಯಲ್ಲಿದೆ. ಸರ್ಕಾರ ಹಾಗೂ ಅರಣ್ಯ ಇಲಾಖೆ ಪರಿಹಾರ ಒದಗಿಸಬೇಕು,” ಎಂದು ಅಲೆಕಾನ್ ಉಪೇಂದ್ರ ಮನವಿ ಮಾಡಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್; ಇನ್ಮುಂದೆ ಈ ದಿನದಂದು ಬರೋಲ್ಲ ಹಣ…!












