ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಲಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮತ್ತಿಕಟ್ಟೆ ರಸ್ತೆಯಲ್ಲಿ ನಡೆದಿದೆ.
ಇದನ್ನೂ ಓದಿ: ಪಾನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಇಂತಹವರಿಗೆ 10 ಸಾವಿರ ದಂಡ!

ಕಾಡಾನೆ ದಾಳಿಯಿಂದ ಕಂಗೆಟ್ಟಿದ್ದ ಮೂಡಿಗೆರೆ ತಾಲೂಕಿನ ಜನರು ಇದೀಗ ಕಾಡುಕೋಣ ದಾಳಿಯಿಂದ ಕಂಗೆಡುವಂತಾಗಿದೆ. ಕಾಡಿನಂಚಿನ ಕೃಷಿ ಭೂಮಿಗೆ ಕಾಡುಕೋಣಗಳು ರಾತ್ರಿ ಹಗಲೆನ್ನದೆ ಹಿಂಡು ಹಿಂಡಾಗಿ ನುಗ್ಗುತ್ತಿದ್ದು ಪ್ರಯಾಣಿಕರು ಜೀವ ಭಯದಲ್ಲಿ ಓಡಾಡುವಂತಾಗಿದೆ.
ನಿನ್ನೆ ರಾತ್ರಿ 7ಗಂಟೆ ಸಮಯದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ಮಾಡಿರುವ ಘಟನೆ ನಡೆದಿದೆ. ಕೆಲಸ ಮುಗಿಸಿ ಮನೆಗೆ ಹಿಂತಿರುಗುವಾಗ ಕಾಡುಕೋಣದ ದಾಳಿಗೆ ಬೈಕ್ ಸವಾರ ಮತ್ತಿಕಟ್ಟೆ ವಾಸಿ ಕುಮಾರ್ ಎಂಬುವವರು ಗಾಯಗೊಂಡಿದ್ದಾರೆ. ಸದ್ಯ ಬಣಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; 15,000 ಸಂಬಳ












