ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಕಾರ್ಮಿಕನ ಮೇಲೆ ಕಾಡುಕೋಣ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಾನುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ: 36,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ

ಭಾನುವಾರ ಶಾನುವಳ್ಳಿ ಧ್ರುವ ಎಂಬುವವರ ತೋಟದಲ್ಲಿ ವಿಠಲ ಪೂಜಾರಿ ಎಂಬುವವರು ಕೃಷಿ ಕೆಲಸ ಮಾಡುತ್ತಿದ್ದಾಗ ಕಾಡುಕೋಣ ದಾಳಿ ನಡೆಸಿದೆ. ವಿಠಲ ಪೂಜಾರಿ ಅವರ ತಲೆ, ಸೊಂಟ ಹಾಗೂ ಕಾಲಿಗೆ ಪೆಟ್ಟಾಗಿದೆ. ಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅರಣ್ಯ ಇಲಾಖೆ ಅಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್; ಇನ್ಮುಂದೆ ಈ ದಿನದಂದು ಬರೋಲ್ಲ ಹಣ…!












