ಆಲ್ದೂರು: ಕಾಡಾನೆ ತುಳಿತಕ್ಕೆ ಮತ್ತೊಬ್ಬ ಕಾರ್ಮಿಕ ಮಹಿಳೆ ಬಲಿ

ಆಲ್ದೂರು: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆ ತುಳಿದು ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಹೆಡದಾಳು ಗ್ರಾಮದಲ್ಲಿ ಘಟನೆ ನಡೆದಿದೆ. ವೀಣಾ (45) ಕಾಡಾನೆ ತುಳಿತಕ್ಕೆ ಮೃತಪಟ್ಟ ಮಹಿಳೆ.

 

ಇದನ್ನೂ ಓದಿ; ಪೌರ ಕಾರ್ಮಿಕರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌; 1433 ಹುದ್ದೆ ಮಂಜೂರು

ಮುಂಜಾನೆ ಕಾಫಿ ತೋಟದ ಕೆಲಸಕ್ಕೆ ಹೋಗುವಾಗ ಘಟನೆ ನಡೆದಿದೆ. ಕಾಡಾನೆಯ ಇರವು ಗೊತ್ತಾಗದೆ ಸಮೀಪದಲ್ಲಿ ಹೋದುದರಿಂದ ತುಳಿತಕ್ಕೆ ಬಲಿಯಾಗಿದ್ದಾರೆ. ಆನೆ ತುಳಿತಕ್ಕೆ ಕಳೆದ ಎರಡು ತಿಂಗಳಲ್ಲಿ ಎರಡನೇ ಬಲಿಯಾಗಿದೆ. ಆಲ್ದೂರು ವಲಯದ ಅರಣ್ಯದಲ್ಲಿ 7 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಅಲ್ಲೇ ಸುತ್ತಮುತ್ತಲಿನ ತೋಟದಲ್ಲಿ ಓಡಾಡುತ್ತಿವೆ. ಆನೆಗಳನ್ನು ಓಡಿಸುವಂತೆ ಸ್ಥಳೀಯರು ಈ ಹಿಂದೆ ಪ್ರತಿಭಟನೆ ನಡೆಸಿ, ಆಗ್ರಹಿಸಿದ್ದರು ಆದರೂ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಇದನ್ನೂ ಓದಿ; ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್; ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಜಮೆಗೆ ಡೆಡ್ ಲೈನ್ ಫಿಕ್ಸ್; ಇನ್ಮುಂದೆ ನಿಮ್ಮ ಖಾತೆಗೆ ಬರಲಿದೆ ಈ ದಿನ ಹಣ

ಇನ್ನು ಸ್ಥಳಕ್ಕೆ ಆಲ್ದೂರು ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

 

ಅಜ್ಜಂಪುರ: ಕುಸಿದು ಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)  8ನೇ ತರಗತಿ ವಿದ್ಯಾರ್ಥಿನಿಯೋರ್ವಳು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಸೊಕ್ಕೆ ಗ್ರಾಮದಲ್ಲಿ ನಡೆದಿದೆ. ಉಷಾ (13) ಮೃತ ಪಟ್ಟ ವಿದ್ಯಾರ್ಥಿನಿ.

 

ಅಜ್ಜಂಪುರ ತಾಲ್ಲೂಕಿನ ಸೊಕ್ಕೆ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 8 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಉಷಾ, ಶನಿವಾರ ಬೆಳಗ್ಗೆ ವಸತಿ ಶಾಲೆಯಲ್ಲಿ ತಲೆ ಸುತ್ತು ಬಂದು ಬಿದ್ದಿದ್ದಾಳೆ. ಕೂಡಲೇ ವಸತಿ ಶಾಲೆಯ ಪ್ರಾಂಶುಪಾಲರು 108 ಮೂಲಕ ಅಜ್ಜಂಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಆದರೆ, ಆಕೆಯನ್ನ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಆಕೆ ಸಾವಿಗೀಡಾಗಿದ್ದಾಳೆ. ಮೃತ ಉಷಾ ಹಲವು ವರ್ಷಗಳಿಂದ ಟಿ.ಬಿ. ಖಾಯಿಲೆಯಿಂದ ಬಳಲುತ್ತಿದ್ದಳು ಎಂದು ವಸತಿ ಶಾಲೆಯ ಪ್ರಾಂಶುಪಾಲ ಶಿವರಾಜ್ ಸ್ಪಷ್ಟಪಡಿಸಿದ್ದು.

ಹಲವು ಬಾರಿ ಆಕೆಯ ಪೊಷಕರಿಗೆ ತಿಳಿಸಿ ಮನೆಗೆ ಕಳುಹಿಸಿ ಅಲ್ಲಿಯೇ ವ್ಯಾಸಂಗ ಮಾಡುವಂತೆ ಹೇಳಿದ್ದರು. ಆದರೆ, ಪೋಷಕರು ಇದೊಂದು ವರ್ಷ ವ್ಯಾಸಂಗ ಮಾಡಲಿ ಮುಂದಿನ ವರ್ಷ ಬದಲಾಯಿಸುವುದಾಗಿ ಹೇಳಿ ವಸತಿ ಶಾಲೆಯಲ್ಲಿ ಬಿಟ್ಟಿದ್ದರು. ಇತ್ತೀಚೆಗೆ ಉಷಾ ತುಂಬಾ ಡಿಪ್ರೆಷನ್ ಗೆ ಒಳಗಾಗಿದ್ದಳು. ಪೋಷಕರು ಚಿಕಿತ್ಸೆ ಕೊಡಿಸಿದ್ದು ಪ್ರತಿ ದಿನ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದಳು.

ದುರಾದೃಷ್ಟವಶಾತ್ ಆಸ್ಪತ್ರೆಗೆ ಬರುವಷ್ಟರಲ್ಲಿ ಬಾಲಕಿ ತೀರಿಕೊಂಡಿದ್ದಳು. ವಿದ್ಯಾರ್ಥಿನಿ ಅಗಲಿಕೆ ತುಂಬಾ ನೋವು ತಂದಿದೆ ಎಂದು ವಸತಿ ಶಾಲೆಯ ಪ್ರಾಂಶುಪಾಲ ತಿಳಿಸಿದ್ದಾರೆ. ಸಾವಿನ ಬಗ್ಗೆ ಅನುಮಾನ ಬಾರದಿರಲು ಪೋಸ್ಟ್ ಮಾರ್ಟಂಗಾಗಿ ಮೃತದೇಹವನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.