ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಬೈಕ್ ಸವಾರನ ಮೇಲೆ ಕಾಡಾನೆ ದಾಳಿ ಮಾಡಿ ಹೊಟ್ಟೆ ಭಾಗಕ್ಕೆ ತಿವಿದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೊಳಗಾಮೆ ಗ್ರಾಮದ ಬಳಿ ನಡೆದಿದೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದವರಿಗೆ 50,000ರೂ ವರೆಗೆ ಸ್ಕಾಲರ್ ಶಿಪ್; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ

ಕಾಫಿ ಎಸ್ಟೇಟ್ ಒಂದರಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿರುವ ಸುಬ್ರಹ್ಮಣ್ಯ ಬೈಕಿನಲ್ಲಿ ತೆರಳುವಾಗ ಏಕಾಏಕಿ ಕಾಡಾನೆ ಬೈಕಿಗೆ ಅಡ್ಡ ಬಂದಿದೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಸುಬ್ರಹ್ಮಣ್ಯ ಆನೆಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾರೆ. ಈ ವೇಳೆ ಆನೆ ಸುಬ್ರಹ್ಮಣ್ಯ ಅವರ ಮೇಲೆ ಎರಗಿದ್ದು, ಹೊಟ್ಟೆ ಭಾಗಕ್ಕೆ ತಿವಿದಿದೆ. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಚೀರಾಡಿದ್ದರಿಂದ ಆನೆ ಬಿಟ್ಟು ಓಡಿದೆ.
ಇದನ್ನೂ ಓದಿ: 60 ಪರ್ಸೆಂಟೇಜ್ ತೆಗೆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಸ್ಥಳೀಯರು ಗಾಯಾಳು ಸುಬ್ರಹ್ಮಣ್ಯ ಅವರನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ.
ಸ್ಥಳಕ್ಕೆ ಮಲ್ಲಂದೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಆಸ್ತಿ ನೋಂದಣಿಗೆ ಇ-ಸಹಿ ಕಡ್ಡಾಯ; ಹೊಸ ನಿಯಮ ಜಾರಿ!












