ಕಾಫಿನಾಡಲ್ಲಿ ಮತ್ತೊಂದು ಕಾಡಾನೆ ಬಲಿ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೆಡೆ ಕಾಡಾನೆಗಳ ಸ್ಥಳಾಂತರ ವಿಚಾರವಾಗಿ ಸಂಘರ್ಷ ನಡೆಯುತ್ತಿದ್ದರೆ, ಮತ್ತೊಂದೆಡೆ ವಿದ್ಯುತ್ ಪ್ರವಹಿಸಿ ಒಂಟಿ ಸಲಗವೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಎಮ್ಮೆದೊಡ್ಡಿ ಸಮೀಪದ ಸಗನಿ ಬಸವನಹಳ್ಳಿಯಲ್ಲಿ ಜೋಳದ ಹೊಲದಲ್ಲಿ ವಿದ್ಯುತ್ ತಂತಿ ತಗುಲಿ ಸುಮಾರು 15 ವರ್ಷದ ಗಂಡು ಆನೆಯೊಂದು ಮೃತಪಟ್ಟಿದೆ. ಕಾಡುಪ್ರಾಣಿಗಳ ಹಾವಳಿ ತಡೆಯುವ ಉದ್ದೇಶದಿಂದ ಜಮೀನಿಗೆ ಅಳವಡಿಸಲಾಗಿದ್ದ ವಿದ್ಯುತ್ ತಂತಿಗೆ ಆನೆ ಸಿಲುಕಿದ್ದು, ವಿದ್ಯುತ್ ಪ್ರವಹಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದೆ ಎನ್ನಲಾಗಿದೆ.

ಘಟನೆ ತಿಳಿಯುತ್ತಿದ್ದಂತೆ ಕಡೂರು ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಜಮೀನಿಗೆ ವಿದ್ಯುತ್ ತಂತಿ ಅಳವಡಿಸಿದ್ದ ವ್ಯಕ್ತಿ ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಕಡೂರು ವಲಯ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.