ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಕಾಡಾನೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಕನಗದ್ದೆ ಗ್ರಾಮದಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ; ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?

ಈ ಭಾಗದಲ್ಲಿ ಮೂರು ಕಾಡಾನೆಗಳನ್ನು ಸೆರೆಹಿಡಿದು ಸಾಗಿಸಲು ಸರ್ಕಾರದ ಆದೇಶದ ಮೇರೆಗೆ ಕಳೆದ ಒಂದು ವಾರದಿಂದ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಮೇಕನಗದ್ದೆ ಗ್ರಾಮದ ಸಮೀಪ ಕಾಡಾನೆ ಕಾಣಿಸಿಕೊಂಡಿದ್ದು, ಅರವಳಿಗೆ ಚುಚ್ಚುಮದ್ದು ಹಾಕಲಾಗಿತ್ತು ಎಂದು ತಿಳಿದುಬಂದಿದೆ.
ಇದನ್ನೂ ಓದಿ; ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಅಗ್ಗ; ಮುಂದಿನ ದಿನಗಳಲ್ಲಿ ಮತ್ತೆ ಏರುವ ಸಾಧ್ಯತೆ
ಅರವಳಿಕೆ ಚುಚ್ಚುಮದ್ದು ಹಾಕಿದ ನಂತರ ಆನೆಯ ಜಾಡು ಹಿಡಿದು ಹೋದಾಗ ಸ್ವಲ್ಪದೂರದಲ್ಲಿಯೇ ಕಾಡಾನೆ ಮೃತಪಟ್ಟು ಬಿದ್ದಿದ್ದು ಕಂಡುಬಂದಿದೆ. ಶನಿವಾರ ರಾತ್ರಿ ಸುಮಾರು 11-30 ರ ವೇಳೆಗೆ ಈ ಘಟನೆ ನಡೆದಿದೆ. ಇತ್ತೀಚೆಗೆ ಆನೆ ಕಾರ್ಯಪಡೆ ಸಿಬ್ಬಂದಿ ಕಾರ್ತಿಕ್ ಗೌಡ ಅವರನ್ನು ಕಾಡಾನೆಯೊಂದು ತುಳಿದು ಸಾಯಿಸಿದ್ದ ದೊಡ್ಡಗೊಳ್ಳ ಎಂಬ ಸ್ಥಳದ ಸಮೀಪದಲ್ಲಿಯೇ ಕಾಡಾನೆ ಸತ್ತು ಬಿದ್ದಿದೆ ಎಂದು ತಿಳಿದುಬಂದಿದೆ
ಸಾವನ್ನಪ್ಪಿರುವ ಆನೆ ಒಂಟಿಗೊಂಬಿನ ಆನೆಯಾಗಿದೆ. ಇದು ಅನೇಕ ವರ್ಷಗಳಿಂದ ಈ ಭಾಗದಲ್ಲಿ ಸಂಚರಿಸುತ್ತಿತ್ತು ಎಂದು ತಿಳಿಬಂದಿದೆ. ಇನ್ನು ಆನೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಅರಣ್ಯ ಇಲಾಖೆಯಿಂದ ಯಾವುದೇ ಅಧಿಕೃತ ಹೇಳಿಕೆ ಕೂಡ ನೀಡಿಲ್ಲ. (ವರದಿ- ತನು ಕೊಟ್ಟಿಗೆಹಾರ)
ಚಿಕ್ಕಮಗಳೂರು: ಸಿಟಿ ರವಿ ಆಪ್ತನ ಮೇಲೆ ಮುಸುಕುಧಾರಿಗಳಿಂದ ಮಾರಣಾಂತಿಕ ಹಲ್ಲೆ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಅವರ ಆಪ್ತ, ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದುರ್ಗೇಶ್ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗುರುವಾರ ಮಧ್ಯರಾತ್ರಿ ಮುಸುಕುಧಾರಿಗಳು ಮನೆಗೆ ನುಗ್ಗಿ ರಾಡ್ ನಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
ತಲೆ ಹಾಗೂ ಕೈಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ದುರ್ಗೇಶ್ ನನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆ ದಾಖಲಿಸಲಾಗಿದೆ. ಈ ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
ಆಪ್ತನ ಆರೋಗ್ಯ ವಿಚಾರಿಸಿದ ಸಿಟಿ ರವಿ:
ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸಿಟಿ ರವಿ ಅವರು ಜಿಲ್ಲಾಸ್ಪತ್ರೆಗೆ ಆಗಮಿಸಿ ದುರ್ಗೇಶ್ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ಯೆ ಮಾಡುವ ಉದ್ದೇಶದಿಂದ ಹಲ್ಲೆ ಮಾಡಲಾಗಿದೆ. ರಾಡ್ ನಿಂದ ಹಲ್ಲೆ ಮಾಡಿರುವ ಉದ್ದೇಶ ಕೊಲೆ ಮಾಡುವುದು. ಮಂಕಿ ಕ್ಯಾಪ್ ಗ್ಲೌಸ್ ಹಾಕಿಕೊಂಡು ಬಂದಿದ್ದಾರೆ ಎಂದು ಆರೋಪಿಸಿದರು.
ತನಿಖೆಗೆ ಒತ್ತಾಯ:
ದುರ್ಗೆಶ್ ಬಗರ್ ಕುಂ ಸಾಗುವಳಿ ಹಾಗೂ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ಮಾಡಿದ್ದಾರೆ. ಗೋಮಾಳ ಜಮೀನಿನಲ್ಲಿ ಕ್ರಷರ್ ಗೆ ಅನುಮತಿ ನೀಡಿದ್ದಾರೆ. ಆದರೆ ರೈತರಿಗೆ ರಾಗಿ ಬೆಳೆಯಲು ಬಿಡುವುದಿಲ್ಲ. ಇದರ ವಿರುದ್ಧ ದುರ್ಗೇಶ್ ಹೋರಾಟ ಮಾಡಿದ್ದಾರೆ. ದುರುದ್ದೇಶ ಪೂರ್ವಕವಾಗಿ ಹತ್ಯೆ ಮಾಡಲು ಹಲ್ಲೆ ಮಾಡಲಾಗಿದೆ. ಪೊಲೀಸ ಇಲಾಖೆ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.












