ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡಲ್ಲಿ ಕಾಡಾನೆ ಸಾವು ಪ್ರಕರಣ ಮುಂದುವರೆದಿದ್ದು, ಇದೀಗ ಚಿಕ್ಕಮಗಳೂರು ತಾಲೂಕಿನ ಕೊಳಗಾಮೆಯ ಆಶ್ರಯ ಎಸ್ಟೇಟ್ ಬಳಿ ಮತ್ತೊಂದು ಕಾಡಾನೆ ವಿದ್ಯುತ್ ಸ್ಪರ್ಶಿಸಿ ದಾರುಣವಾಗಿ ಸಾವನ್ನಪ್ಪಿದೆ.
ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ದಂಡ ಫಿಕ್ಸ್; ಯಾಕೆ ಗೊತ್ತಾ…? ಮಿಸ್ ಮಾಡ್ದೆ ಈ ಸುದ್ದಿ ಓದಿ

ಭದ್ರಾ ಅಭಯಾರಣ್ಯದಿಂದ ಆಹಾರ ಅರಸಿ ಬಂದ ಕಾಡಾನೆ, ತೋಟಕ್ಕೆ ಅಳವಡಿಸಿದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತೋಟದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್; ಈ ಷರತ್ತು ಅನ್ವಯ!
ಕಾಡಾನೆ ಸಾವು ಪ್ರಕರಣಗಳು ಪದೇ ಪದೇ ನಡೆಯುತ್ತಿದ್ದರೂ, ಅರಣ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸಿಲ್ಲ, ಇನ್ನಾದರೂ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಿದೆ ಎಂದು ಸಾರ್ವಜನಿಕ ವಲಯದಲ್ಲಿ ಮಾತುಗಳು ಕೇಳಿ ಬಂದಿದೆ.
ಇದನ್ನೂ ಓದಿ: ಕೊನೆ ಹಂತದಲ್ಲಿ HSRP ನಂಬರ್ ಪ್ಲೇಟ್ ಅಳವಡಿಕೆಯ ನಿಯಮ ಚೇಂಚ್; HSRP ನಂಬರ್ ಪ್ಲೇಟ್ ಈ ವಾಹನಗಳಿಗೆ ಮಾತ್ರ ಅನ್ವಯ!












