ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾರ್ಮಾಡಿ ಘಾಟಿಯ 2ನೇ ಹಾಗೂ 3ನೇ ತಿರುವಿನ ನಡುವಿನ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಕಾಡಾನೆ ಕಾಣಿಸಿಕೊಂಡು ಸುಮಾರು ಒಂದು ತಾಸಿಗಿಂತ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಯಿತು.
ಇದನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ

ರಾತ್ರಿ ಸುಮಾರು 9.45ರ ವೇಳೆಗೆ ಕಾಡಾನೆ ರಸ್ತೆ ಬದಿಯಲ್ಲಿದ್ದ ಮರವನ್ನು ಮುರಿದು ಹಾಕಿ, ರಸ್ತೆ ಮಧ್ಯದಲ್ಲೇ ನಿಂತು ಆಹಾರ ಸೇವಿಸುತ್ತಿದ್ದುದರಿಂದ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಈ ವೇಳೆ ಕೆಲವು ವಾಹನ ಸವಾರರು ಕಾಡಾನೆಯನ್ನು ಅಟ್ಟಲು ಪ್ರಯತ್ನಿಸಿದರೂ ಅದು ಸ್ಥಳದಿಂದ ಕದಲದೆ ನಿಂತ ಕಾರಣ ವಾಹನಗಳು ಎರಡೂ ದಿಕ್ಕಿನಲ್ಲಿ ಸಾಲುಗಟ್ಟಿ ನಿಂತವು.

ಕಾಡಾನೆ ಕಂಡುಬಂದ ಪ್ರದೇಶದಲ್ಲಿ ಮೊಬೈಲ್ ನೆಟ್ವರ್ಕ್ ಸೌಲಭ್ಯ ಇಲ್ಲದ ಕಾರಣ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದರು. (ವರದಿ – ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಆಧಾರ್ ಸೇವಾ ಕೇಂದ್ರದಲ್ಲಿ ಜಾಬ್, ಅರ್ಜಿ ಆಹ್ವಾನ













