ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷವಾಗಿದೆ. ಮೊನ್ನೆ ರಾತ್ರಿ ಸರ್ಕಾರಿ ಬಸ್ಸಿಗೆ ಅಡ್ಡ ಬಂದಿದ್ದ ಕಾಡಾನೆ ಅರ್ಧ ಗಂಟೆ ನಿಂತಲ್ಲೇ ನಿಂತ ಪರಿಣಾಮ ಸುಮಾರು ಎರಡು ಕಿ.ಮೀ.ನಷ್ಟು ದೂರ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಇದನ್ನೂ ಓದಿ: ಬಿಪಿಎಲ್, ಅಂತ್ಯೋದಯ ಕಾರ್ಡ್’ದಾರರಿಗೆ ಇಲ್ಲಿದೆ ಗುಡ್ ನ್ಯೂಸ್; ಏನದು ತಿಳಿಯಿರಿ

ಇಂದು ಚಾರ್ಮಾಡಿ ಘಾಟಿಯಲ್ಲಿ ಬೆಳ್ಳಂ ಬೆಳಗ್ಗೆ ಮತ್ತೆ ಒಂಟಿ ಸಲಗದ ದರ್ಶನ ಆಗಿದೆ. ಪದೇ ಪದೇ ಆನೆ ಎದುರಾಗುತ್ತಿರುವುದು ಪ್ರಯಾಣಿಕರಲಿ ಆತಂಕ ಮೂಡಿಸಿದೆ. ಈ ಮಾರ್ಗದಲ್ಲಿ ಆನೆ ಎದುರಾದರೆ ತಪ್ಪಿಸಿಕೊಳ್ಳೋದು ಕಷ್ಟವಾಗಿದ್ದು, ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಚಾರ್ಮಾಡಿ ಘಾಟಿ ತಪ್ಪಲಿನ ಗ್ರಾಮಗಳಿಗೂ ಒಂಟಿ ಸಲಗ ದಾಳಿ ಇಟ್ಟಿದ್ದು, ಆನೆಯನ್ನ ಸೆರೆ ಹಿಡಿದು ಸ್ಥಳಾಂತರಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ; ಹೈಕೋರ್ಟ್ ಆದೇಶದಿಂದ ವಾಹನ ಸವಾರರು ನಿರಾಳ; ಏನಿದೆ ಹೈಕೋರ್ಟ್ ಆದೇಶ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಡೆಂಗ್ಯೂ ತಾಂಡವ: ಜಿಲ್ಲಾ ಉಸ್ತುವಾರಿ ಸಚಿವರು ನಾಪತ್ತೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಡೆಂಗ್ಯೂ ತಾಂಡವವಾಡುತ್ತಿದ್ದು ಸುಮಾರು 350ಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ, ಇದೇ ಮೊದಲ ಬಾರಿಗೆ ಇಷ್ಟೊಂದು ಪ್ರಕರಣಗಳು ದಾಖಲಾಗಿವೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
ಆದರೆ ಡೆಂಗ್ಯೂ ಜ್ವರಕ್ಕೆ ಕಾಫಿ ನಾಡು ಜನರು ತತ್ತರಿಸಿ ಹೋಗಿದ್ದರೂ, ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಜೆ ಜಾರ್ಜ್ ಅವರು ಜನರ ಬಳಿ ಸುಳಿದಿಲ್ಲ, ಜಿಲ್ಲೆಯಿಂದ ಸಂಪೂರ್ಣವಾಗಿ ನಾಪತ್ತೆಯಾಗಿದ್ದಾರೆ ಎಂದು ಎಂದು ಬಿಜೆಪಿ ಯುವಮೋರ್ಚಾ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹರಿಬಿಟ್ಟು ಅಭಿಯಾನ ಮಾಡುತ್ತಿದೆ.
ಜಾರ್ಜ್ ಸಾಹೇಬ, ಮರೆತು ಹೋಯ್ತಾ – ನೀವೇ ಚಿಕ್ಕಮಗಳೂರು ಉಸ್ತುವಾರಿ ಸಚಿವ ಎಂಬ ಸಂದೇಶದೊಂದಿಗೆ ಅಭಿಯಾನ ನಡೆಸಲಾಗುತ್ತಿದೆ.












