ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ರಸ್ತೆಯಲ್ಲಿಯೇ ಕಾಡಾನೆ ಕಾಣಿಸಿಕೊಂಡಿದ್ದು ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ.
ಇದನ್ನೂ ಓದಿ: ಹುಟ್ಟೂರು ಶೃಂಗೇರಿಯನ್ನ ಕೊಂಡಾಡಿದ ವಜ್ರಕಾಯ ಬೆಡಗಿ; ನಾನು ಶೃಂಗೇರಿಯವಳು ಎನ್ನಲು ಈ ಕಾರಣಕ್ಕೆ ಹೆಮ್ಮೆ ನಭಾ ನಟೇಶ್..

ರಸ್ತೆಯ ಮಧ್ಯದಲ್ಲೇ ಒಂದೇ ಸ್ಥಳದಲ್ಲಿ ನಿಂತಿದ್ದ ಆನೆಯನ್ನು ನೋಡಲು ಪ್ರವಾಸಿಗರು ವಾಹನ ನಿಲ್ಲಿಸಿ ದೂರದಿಂದಲೇ ಗಮನ ಹರಿಸಿದರು. ಕೆಲವರು ಮೊಬೈಲ್‌ನಲ್ಲಿ ದೃಶ್ಯ ಸೆರೆಹಿಡಿಯಲು ಯತ್ನಿಸಿದರೆ, ಇನ್ನೂ ಕೆಲವರು ಭಯದಿಂದ ದೂರ ಸರಿದಿದ್ದಾರೆ.

ಆನೆ ದೀರ್ಘಕಾಲ ಒಂದೇ ಸ್ಥಳದಲ್ಲಿ ನಿಂತಿದ್ದರಿಂದ ಸಂಚಾರಕ್ಕೂ ತೊಂದರೆ ಉಂಟಾಯಿತು. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ವರ್ಷದ ಕೊನೆಯ ಖಗ್ರಾಸ ಚಂದ್ರಗ್ರಹಣ; ಶುರು-ಅಂತ್ಯ ಯಾವಾಗ?













