ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ.
ಇದನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!

ತಾಲೂಕಿನ ಕೆರೆಕಟ್ಟೆ ಗ್ರಾಮದ ಕೆರೆಗದ್ದೆಯಲ್ಲಿ ಶನಿವಾರ ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ. ದಾಳಿಯಾದ ದಿನ ರಾತ್ರಿಯೇ ಕಾಡಾನೆ ಸೆರೆಗೆ ಸರ್ಕಾರ ಆದೇಶಿಸಿತ್ತು. ಅದರಂತೆ ಭಾನುವಾರ ಬೆಳಗ್ಗೆ ಘಟನಾ ಸ್ಥಳಕ್ಕೆ ಬಂದಿದ್ದ ದುಬಾರೆ ಆನೆ ಕ್ಯಾಂಪ್ನ ಪ್ರಶಾಂತ್, ಏಕಲವ್ಯ, ಅಜ್ಜಯ್ಯ ಆನೆಗಳ ತಂಡವು ನಿನ್ನೆ ಸಂಜೆ ಭಗವತಿ ಅರಣ್ಯ ಪ್ರದೇಶದಲ್ಲಿ ಒಂಟಿಸಲಗವನ್ನು ಸೆರೆ ಹಿಡಿಯಲು ಯಶಸ್ವಿಯಾಗಿದೆ.
ಕಾಡಾನೆಯ ಆತಂಕದಲ್ಲಿದ್ದ ಜನರು ಸದ್ಯ ನಿಟ್ಟುಸಿರು ಬಿಟ್ಟಿದ್ದಾರೆ.
ಇದನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ












