ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಮುಂದುವರಿದ ಗಾಳಿ-ಮಳೆ ಅಬ್ಬರದಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ.
ಇದನ್ನೂ ಓದಿ: ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆಗಳು ಬಂದ್; ಯಾಕೆ ಗೊತ್ತಾ?

ಧರ್ಮಸ್ಥಳದಿಂದ ಬರುತ್ತಿದ್ದ ಪ್ರವಾಸಿಗರ ಕಾರೊಂದು ಚಾರ್ಮಾಡಿ ಘಾಟ್ ಅಣ್ಣಪ್ಪ ಸ್ವಾಮಿ ದೇಗುಲದ ಬಳಿ ಕಾರು ಪಾಸ್ ಆಗುತ್ತಿದ್ದಂತೆ ಮರ ಮುರಿದು ಬಿದ್ದಿದೆ. ಮರ ಕಾರಿನ ಮೇಲೆ ಬಿದ್ದಿದ್ರೆ ದೊಡ್ಡ ಮಟ್ಟದ ಅನಾಹುತವಾಗುತ್ತಿತ್ತು. ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರಾಗಿದ್ದಾರೆ.

ಇದನ್ನೂ ಓದಿ: ರಾಜ್ಯದ ಬಿಸಿಯೂಟ ತಯಾರಕರಿಗೆ ಗುಡ್ ನ್ಯೂಸ್; ಗೌರವಧನ ಹೆಚ್ಚಳ ಮಾಡಿ ಸರ್ಕಾರ ಆದೇಶ!
ಕೊಟ್ಟಿಗೆಹಾರ ಸ್ಥಳೀಯ ಯುವಕರು, ಪೊಲೀಸರಿಂದ ರಸ್ತೆಗೆ ಬಿದ್ದಿದ್ದ ಮರ ತೆರವು ಮಾಡಿದ್ದು, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ €18,750 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?















