ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಳೆದ ಐದು ದಿನಗಳಿಂದ ಗ್ಯಾಸ್ ಸಿಲಿಂಡರ್ ಸರಬರಾಜು ಆಗದ ಹಿನ್ನೆಲೆ ಬಿಸಿಯೂಟ ಯೋಜನೆ ಸಂಕಷ್ಟಕ್ಕೆ ಸಿಲುಕಿದೆ. ಇದರಿಂದ ಅಡುಗೆ ಸಿಬ್ಬಂದಿ ಬಯಲಿನಲ್ಲಿ ಸೌದೆ ಬಳಸಿ ವಿದ್ಯಾರ್ಥಿಗಳಿಗೆ ಬಿಸಿಯೂಟ ತಯಾರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಈ ಕುಟುಂಬಗಳಿಗೆ ಎಲ್ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ

ಶಾಲೆಯಲ್ಲಿ ಪ್ರತಿದಿನ ನೂರಾರು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಸಲಾಗುತ್ತದೆ. ಆದರೆ ಗ್ಯಾಸ್ ಸಿಲಿಂಡರ್ ಪೂರೈಕೆ ಆಗದೆ ಇರುವುದರಿಂದ ಅಡುಗೆ ಸಿಬ್ಬಂದಿ ಪರದಾಡುತ್ತಿದ್ದಾರೆ. ಅನಿವಾರ್ಯವಾಗಿ ಬಯಲಿನಲ್ಲಿ ಸೌದೆ ಬಳಸಿ ಅಡುಗೆ ಮಾಡಿ ವಿದ್ಯಾರ್ಥಿಗಳಿಗೆ ಊಟ ಸಿದ್ಧಪಡಿಸಲಾಗುತ್ತಿದೆ.
ಈ ಕುರಿತು ಶಾಲಾ ಅಧಿಕಾರಿಗಳು ಗ್ಯಾಸ್ ಏಜೆನ್ಸಿಗೆ ಹಲವು ಬಾರಿ ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಜಿಲ್ಲಾಧಿಕಾರಿಗಳ ನಿರ್ದೇಶನವಿದ್ದರೂ ಗ್ಯಾಸ್ ಏಜೆನ್ಸಿಯ ನಿರ್ಲಕ್ಷ್ಯದಿಂದ ಸಮಸ್ಯೆ ಮುಂದುವರಿದಿದೆ ಎಂದು ಶಾಲಾ ಸಿಬ್ಬಂದಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಮಾ.18 ರಿಂದ SSLC ಪರೀಕ್ಷೆ ಆರಂಭ; ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ
ಇದೀಗ ವಿದ್ಯಾರ್ಥಿಗಳ ಪರೀಕ್ಷಾ ಸಮಯವಾಗಿರುವುದರಿಂದ ಶಿಕ್ಷಕರು ಮತ್ತು ಸಿಬ್ಬಂದಿಗೆ ತೊಂದರೆ ಉಂಟಾಗಿದೆ. ಅಡುಗೆ ಸಿದ್ಧಪಡಿಸಲು ಹೆಚ್ಚು ಸಮಯ ತೆಗೆದುಕೊಳ್ಳುತ್ತಿರುವುದರಿಂದ ಬಿಸಿಯೂಟ ವ್ಯವಸ್ಥೆ ನಿರ್ವಹಿಸುವುದು ಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿತ ಅಧಿಕಾರಿಗಳು ತಕ್ಷಣ ಗ್ಯಾಸ್ ಸಿಲಿಂಡರ್ ಸರಬರಾಜು ವ್ಯವಸ್ಥೆ ಸರಿಪಡಿಸಬೇಕೆಂದು ಶಿಕ್ಷಕರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ರಾಜ್ಯದ ರೈತರೇ ಗಮನಿಸಿ; ಈ ಯೋಜನೆಯಡಿ 5 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿ ಸಾಲ!












