ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ನಗರದ ವಿವಿಧ ಶಾದಿಮಹಲ್ ಗಳಲ್ಲಿ ಮದುವೆಯ ಸಮಯದಲ್ಲಿ ಆಭರಣ, ನಗದನ್ನು ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಸೂಳೆಬೈಲ್ ವಾಸಿ ರುಕ್ಸಾರ್ ಫಿರ್ದೋಸ್ (30) ಬಂಧಿತ ಮಹಿಳೆ.
ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ರಿಲೀಫ್; ಏನದು, ಮಿಸ್ ಮಾಡ್ದೆ ಈ ಸುದ್ದಿ ಓದಿ

ತುಂಗಾನಗರ ಪೊಲೀಸ್ ಠಾಣೆಯ 4 ಪ್ರಕರಣಗಳಲ್ಲಿ 18 ಲಕ್ಷ ರೂ. ಅಂದಾಜು ಮೌಲ್ಯದ 120ಗ್ರಾಂ ಬಂಗಾರದ ಆಭರಣಗಳನ್ನು ಈಕೆಯಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಡಿವೈಎಸ್ಪಿ ಬಾಬು ಅಂಜನಪ್ಪ, ತುಂಗಾನಗರ ಇನ್ಸ್ಪೆಕ್ಟರ್ ಕೆ.ಟಿ ಗುರುರಾಜ್, ಎಸ್ ಐ ಗಾದಿಲಿಂಗಪ್ಪ ಗೌಡರ್ ನೇತೃತ್ವದ ತಂಡ ಮಹಿಳೆಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮೊಬೈಲ್ ನಲ್ಲೇ ಸಿಗಲಿದೆ ಹಳೆಯ ಪಹಣಿ















