ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಆರೈಕೆ ಮಾಡಲು ಬಂದಿದ್ದ ಸ್ನೇಹಿತೆ ಮೇಲೆ ಮಹಿಳೆಯ ಪತಿ ಹಲ್ಲೆ ಮಾಡಿರುವ ಘಟನೆ ನಡೆದಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ

ಕೌಟುಂಬಿಕ ಕಲಹದ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಪತ್ನಿ ಮೇಲೆ ಹಲ್ಲೆ ನಡೆಸಿದ್ದ. ಅಸ್ವಸ್ಥಳಾಗಿದ್ದ ಮಹಿಳೆಯನ್ನು ಆಕೆಯ ಸ್ನೇಹಿತೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ವಾರ್ಡ್ ನಲ್ಲಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ಪತಿ, ಆಕೆಯ ಸ್ನೇಹಿತೆಯ ಮೇಲೆ ಹಲ್ಲೆ ನಡೆಸಿದ್ದಾನೆ.
ಇದನ್ನೂ ಓದಿ: ಜಮೀನು ಸರ್ವೆಯಲ್ಲಿ ಬದಲಾವಣೆ;ಇನ್ಮುಂದೆ 10 ನಿಮಿಷದಲ್ಲಿ ಮುಗಿಯಲಿದೆ ಲ್ಯಾಂಡ್ ಸರ್ವೆ; ಈ ಕುರಿತು ಕಂದಾಯ ಸಚಿವ ಹೇಳಿದ್ದೇನು?
ಸಾರ್ವಜನಿಕರ ಎದುರಲ್ಲೆ ಅವಾಚ್ಯವಾಗಿ ನಿಂದಿಸಿದ್ದಾನೆ. ಈ ಸಂದರ್ಭ ಪೊಲೀಸ್ ಸಿಬ್ಬಂದಿಯೊಬ್ಬರು ಆ ವ್ಯಕ್ತಿಯನ್ನು ವಾರ್ಡ್ನಿಂದ ಎಳೆದೊಯ್ದಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಇಂಧನ ಸಚಿವ ಕೊಟ್ರು ಸಿಹಿಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ












