ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಮಾರಾಕಾಸ್ತ್ರದಿಂದ ಕೊಚ್ಚಿ ಮಹಿಳೆಯೊಬ್ಬರನ್ನು ಹತ್ಯೆಗೈದಿರುವ ಘಟನೆ ಶಿವಮೊಗ್ಗ ತಾಲೂಕಿನ ದುಮ್ಮಳ್ಳಿಯ ಸಿದ್ದೇಶ್ವರ ನಗರದಲ್ಲಿ ಸೋಮವಾರ ಬೆಳಕಿಗೆ ಬಂದಿದೆ. ಹತ್ಯೆಯಾದ ಮಹಿಳೆ ಗಂಗಮ್ಮ (45) ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!

ಹಳೇಯ ದ್ವೇಷದ ಹಿನ್ನೆಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಮೃತದೇಹವನ್ನು ಮೆಗ್ಗಾನ್ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿ ನಾಗೇಶ್ ನಾಯ್ಕ ಮತ್ತು ಹರೀಶ್ ಎಂಬುವರನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ












